ಜಮ್ಮುವಿನಲ್ಲಿ ಪಾಕ್ ದಾಳಿ: ಅಧಿಕಾರಿ, 2 ಭದ್ರತಾ ಸಿಬ್ಬಂದಿ ಸೇರಿ 7 ಮಂದಿ ಸಾವು

ಘಟನೆಯ ಬಳಿಕ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ದಾಳಿಗೊಳಗಾದ ವಸತಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಗಡಿಪಾರ ಶೆಲ್ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಅವರು ಘೋಷಿಸಿದರು.;

Update: 2025-05-11 06:03 GMT

ಶನಿವಾರ (ಮೇ 10) ಜಮ್ಮು ಪ್ರದೇಶದಲ್ಲಿ ಪಾಕಿಸ್ತಾನದಿಂದ ನಡೆದ ತೀವ್ರ ಮಾರ್ಟಾರ್ ಶೆಲ್ ದಾಳಿ ಮತ್ತು ಡ್ರೋನ್ ದಾಳಿಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಹಿರಿಯ ಸರ್ಕಾರಿ ಅಧಿಕಾರಿ ಹಾಗೂ ಇಬ್ಬರು ಭದ್ರತಾ ಸಿಬ್ಬಂದಿ ಸೇರಿದಂತೆ ಒಟ್ಟು ಏಳು ಜನರು ಮೃತಪಟ್ಟಿದ್ದಾರೆ ಮತ್ತು 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯು, ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ಸಂಘರ್ಷವನ್ನು ಕೊನೆಗೊಳಿಸಲು ಒಪ್ಪಿಕೊಂಡ ಕೆಲವೇ ಗಂಟೆಗಳ ನಂತತ ಸಂಭವಿಸಿದೆ. ಈ ಒಪ್ಪಂದವು ಏಪ್ರಿಲ್ 22ರ ಪಹಲ್ಗಾಮ್ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತೀಯ ಸೇನೆಯು ಪಾಕಿಸ್ತಾನದಲ್ಲಿ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದ ನಂತರ ಉಂಟಾಗಿದ್ದ ತೀವ್ರ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ನಡೆದಿದೆ.

ಘಟನೆಯ ಬಳಿಕ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ದಾಳಿಗೊಳಗಾದ ವಸತಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಗಡಿಪಾರ ಶೆಲ್ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಅವರು ಘೋಷಿಸಿದರು.

ಶನಿವಾರ ಬೆಳಿಗ್ಗೆ 5 ಗಂಟೆ ಸುಮಾರಿಗೆ ಜಮ್ಮು ನಗರ ಮತ್ತು ಇತರ ಪ್ರಮುಖ ಪಟ್ಟಣಗಳ ನಿವಾಸಿಗಳು ವೈಮಾನಿಕ ದಾಳಿಯ ಸೈರನ್‌ಗಳು ಮತ್ತು ಸ್ಫೋಟಗಳ ಧ್ವನಿಯಿಂದ ಎಚ್ಚರಗೊಂಡಿದ್ದರು. ಗಡಿ ಪ್ರದೇಶದ ನಿವಾಸಿಗಳು ರಾತ್ರಿಯಿಡೀ ಪಾಕಿಸ್ತಾನದ ಕಡೆಯಿಂದ ನಿರಂತರ ಶೆಲ್ ದಾಳಿಯಿಂದ ತತ್ತರಿಸಿದ್ದರು. ರಕ್ಷಣಾ ಅಧಿಕಾರಿಗಳ ಪ್ರಕಾರ, ಪಾಕಿಸ್ತಾನವು ಡ್ರೋನ್ ದಾಳಿಗಳು ಮತ್ತು ಇತರ ಶಸ್ತ್ರಾಸ್ತ್ರಗಳೊಂದಿಗೆ ಶನಿವಾರದಾದ್ಯಂತ ಗಡಿಯಲ್ಲಿ ಆಕ್ರಮಣವನ್ನು ಮುಂದುವರೆಸಿತು.

ಪಾಕ್ ಡ್ರೋನ್‌ಗಳ ಶಿಲಾಖಂಡರಾಶಿ ಪತ್ತೆ

ಭಾರತೀಯ ಸೇನೆಯ ವಾಯು ರಕ್ಷಣಾ ಜಾಲದಿಂದ ಹೊಡೆದುರುಳಿಸಲ್ಪಟ್ಟ ಪಾಕಿಸ್ತಾನದ ಕಮಿಕೇಜ್ ಡ್ರೋನ್‌ಗಳ ಭಾಗಗಳು ಜಮ್ಮುವಿನ ಬಿಷ್ಣಾ ಮತ್ತು ಪರ್ಮಾಂಡಲ್ ಪ್ರದೇಶಗಳಲ್ಲಿ ಕಂಡುಬಂದಿತು. ಪೊಲೀಸರು ಈ ವಸ್ತುಗಳನ್ನು ವಶಪಡಿಸಿಕೊಂಡು, ಸಾರ್ವಜನಿಕರಿಗೆ ಯಾವುದೇ ಅನುಮಾನಾಸ್ಪದ ವಸ್ತುಗಳನ್ನು ಮುಟ್ಟದಂತೆ ಎಚ್ಚರಿಕೆ ನೀಡಿದ್ದಾರೆ. ಸಹಾಯವಾಣಿ ಸಂಖ್ಯೆಗಳನ್ನೂ ಬಿಡುಗಡೆ ಮಾಡಲಾಗಿದೆ.

ಶನಿವಾರ ಸಂಜೆ 5 ಗಂಟೆಯಿಂದ ಜಾರಿಗೆ ಬಂದ ಯುದ್ಧವಿರಾಮ ಒಪ್ಪಂದದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನವು ಅದನ್ನು ಉಲ್ಲಂಘಿಸಿದೆ ಎಂದು ಭಾರತ ಆರೋಪಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು, ಪಾಕಿಸ್ತಾನವು ಈ ಉಲ್ಲಂಘನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. 

Tags:    

Similar News