ಅಕ್ರಮ ಹಣ ವರ್ಗಾವಣೆ ಪ್ರಕರಣ: ಹೇಮಂತ್ ಸೊರೇನ್‌ಗೆ ಜಾಮೀನು

Update: 2024-06-28 08:27 GMT

ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್‌ ಅವರಿಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ (ಜೂನ್ 28) ಜಾಮೀನು ಮಂಜೂರು ಮಾಡಿದೆ.

ಸೊರೆನ್‌ ಅವರ ಜಾಮೀನು ಅರ್ಜಿಯ ತೀರ್ಪನ್ನು ಹೈಕೋರ್ಟ್ ಜೂನ್ 13ರಂದು ಕಾಯ್ದಿರಿಸಿತ್ತು. 

ʻಸೋರೆನ್‌ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಮೇಲ್ನೋಟಕ್ಕೆ ಅವರು ತಪ್ಪಿತಸ್ಥರಲ್ಲ ಮತ್ತು ಜಾಮೀನು ನೀಡಿದಲ್ಲಿ ಅಪರಾಧ ಮಾಡುವ ಸಾಧ್ಯತೆಯಿಲ್ಲಎಂದು ನ್ಯಾಯಾಲಯ ಹೇಳಿದೆ,ʼ ಎಂದು ಸೋರೆನ್ ಅವರ ವಕೀಲ ಅರುಣಾಭ್ ಚೌಧರಿ ತಿಳಿಸಿದರು. 

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ)ದ ಕಾರ್ಯನಿರ್ವಾಹಕ ಅಧ್ಯಕ್ಷರಾದ ಸೋರೆನ್ ಅವರನ್ನು ಜನವರಿ 31 ರಂದು ಜಾರಿ ನಿರ್ದೇಶನಾಲಯ (ಇಡಿ) ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿತ್ತು. 

ಸೊರೇನ್(48)‌ ಪ್ರಸ್ತುತ ಬಿರ್ಸಾ ಮುಂಡಾ ಜೈಲಿನಲ್ಲಿದ್ದಾರೆ. 

ವಿಚಾರಣೆ ವೇಳೆ ಇಡಿ ಪರ ವಕೀಲ ಎಸ್‌.ವಿ. ರಾಜು, ಸೊರೇನ್‌ ಅವರು ಜಾಮೀನಿನ ಮೇಲೆ ಬಿಡುಗಡೆಯಾದರೆ ಇದೇ ರೀತಿಯ ಅಪರಾಧ ಮಾಡುತ್ತಾರೆ ಎಂದು ವಾದಿಸಿದ್ದರು.

Tags:    

Similar News