Supreme Court | ನ್ಯಾ.ಚಂದ್ರಚೂಡ್ ಶಿಫಾರಸು; ಮುಂದಿನ ಸಿಜೆಐ ನ್ಯಾ.ಸಂಜೀವ್ ಖನ್ನಾ
ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಸೇವಾವಧಿಯು 2025 ಮೇ 13 ರವರೆಗೆ ಇದೆ. ಒಂದು ವೇಳೆ ಸಂಜೀವ್ ಖನ್ನಾ ಅವರು ಸಿಜೆಐ ಆಗಿ ನೇಮಕಗೊಂಡರೆ ಕೇವಲ ಆರು ತಿಂಗಳು ಮಾತ್ರ ಕಾರ್ಯ ನಿರ್ವಹಿಸಲಿದ್ದಾರೆ.;
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ತಮ್ಮ ಉತ್ತರಾಧಿಕಾರಿಯನ್ನಾಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಹೆಸರು ಶಿಫಾರಸು ಮಾಡಿದ್ದಾರೆ.
ಸಿಜೆಐ ಡಿ.ವೈ.ಚಂದ್ರಚೂಡ್ ಅವರು ನ.10ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ. ತಮ್ಮ ಬಳಿಕ ಹಿರಿಯ ನ್ಯಾಯಮೂರ್ತಿಯಾಗಿರುವ ಸಂಜೀವ್ ಖನ್ನಾ ಅವರನ್ನು ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡುವಂತೆ ಡಿ.ವೈ.ಚಂದ್ರಚೂಡ್ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಸೇವಾವಧಿಯು 2025 ಮೇ 13 ರವರೆಗೆ ಇದೆ. ಒಂದು ವೇಳೆ ಸಂಜೀವ್ ಖನ್ನಾ ಅವರು ಸಿಜೆಐ ಆಗಿ ನೇಮಕಗೊಂಡರೆ ಕೇವಲ ಆರು ತಿಂಗಳು ಮಾತ್ರ ಕಾರ್ಯ ನಿರ್ವಹಿಸಲಿದ್ದಾರೆ.
ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು 1983 ರಲ್ಲಿ ವಕೀಲಿಕೆ ವೃತ್ತಿ ಆರಂಭಿಸಿದ್ದರು. ತೆರಿಗೆ, ವಾಣಿಜ್ಯ ಹಾಗೂ ಪರಿಸರಕ್ಕೆ ಸಂಬಂಧಿಸಿದ ಹಲವು ವಿಷಯಗಳಲ್ಲಿ ಪರಿಣಿತಿ ಹೊಂದಿದ್ದಾರೆ. 2005 ರಲ್ಲಿ ದೆಹಲಿ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದ ಖನ್ನಾ ಅವರನ್ನು ವರ್ಷದ ಬಳಿಕ ಖಾಯಂ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿತ್ತು. 2019 ಜೂನ್ 18 ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿದ್ದರು.