ಮಧ್ಯಂತರ ಜಾಮೀನು ವಿಸ್ತರಣೆ ಕೋರಿ ಸುಪ್ರೀಂ ಕದ ತಟ್ಟಿದ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಗ್ಯದ ಆಧಾರದ ಮೇಲೆ ಮಧ್ಯಂತರ ಜಾಮೀನನ್ನು ಏಳು ದಿನ ವಿಸ್ತರಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಲೋಕಸಭೆ ಚುನಾವಣೆಗೆ ಪ್ರಚಾರ ಮಾಡಲು ಮೇ 10 ರಂದು ಸುಪ್ರೀಂ ಕೋರ್ಟ್ ಅವರಿಗೆ 21 ದಿನಗಳ ಮಧ್ಯಂತರ ಜಾಮೀನು ನೀಡಿತ್ತು. ಆದರೆ, ಮುಖ್ಯಮಂತ್ರಿ ಕಚೇರಿ ಅಥವಾ ದೆಹಲಿ ಸಚಿವಾಲಯಕ್ಕೆ ಭೇಟಿ ನೀಡುವುದನ್ನು ಮತ್ತು ಅಧಿಕೃತ ಕಡತಗಳಿಗೆ ಸಹಿ ಮಾಡುವುದನ್ನು ನಿರ್ಬಂಧಿಸಿತ್ತು.
ತೂಕ ನಷ್ಟ: 7 ಕೆಜಿ ತೂಕ ಕಳೆದುಕೊಂಡಿರುವುದು ಸೇರಿದಂತೆ ಆರೋಗ್ಯದ ಆಧಾರದ ಮೇಲೆ ಮಧ್ಯಂತರ ಜಾಮೀನು ಏಳು ದಿನ ವಿಸ್ತರಿಸುವಂತೆ ಕೇಜ್ರಿವಾಲ್ ಕೋರಿದ್ದಾರೆ. ಕೆಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಬೇಕಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಪ್ರಕರಣ 2021-22 ರಲ್ಲಿ ದೆಹಲಿ ಸರ್ಕಾರದ ಅಬಕಾರಿ ನೀತಿಯ ರಚನೆ ಮತ್ತು ಕಾರ್ಯಗತಗೊಳಿಸುವಿಕೆಯಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ.