Kolkata rape-murder | ಸುಪ್ರೀಂಕೋರ್ಟ್ ಸೂಮೋಟೋ ಪ್ರಕರಣ, ವಿಚಾರಣೆ 20ಕ್ಕೆ

Update: 2024-08-19 06:05 GMT

ಕೋಲ್ಕತ್ತಾದ ಆರ್‌.ಜಿ.ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಭಾನುವಾರ (ಆಗಸ್ಟ್ 18) ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿದ್ದು, ಮಂಗಳವಾರ, ಆಗಸ್ಟ್ 20 ರಂದು ವಿಚಾರಣೆ ನಡೆಸಲಿದೆ.

ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ಆಗಸ್ಟ್ 20 ರ ಪ್ರಕರಣ ಪಟ್ಟಿ ಪ್ರಕಾರ, ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ಮಂಗಳವಾರ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಘಟನೆ ಹಾಗೂ ಸಂಬಂಧಿಸಿದ ಸಮಸ್ಯೆ ಕುರಿತು ವಿಚಾರಣೆ ನಡೆಸಲಿದೆ. 

ಕಲ್ಕತ್ತಾ ಹೈಕೋರ್ಟ್ ಇತ್ತೀಚೆಗೆ ತನಿಖೆಯನ್ನು ಕೋಲ್ಕತ್ತಾ ಪೊಲೀಸರಿಂದ ಸಿಬಿಐಗೆ ವರ್ಗಾಯಿಸಿದೆ. 

ಸರ್ಕಾರಿ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ದೇಶಾದ್ಯಂತ ಪ್ರತಿಭಟನೆಗೆ ಕಾರಣವಾಗಿದೆ.

Tags:    

Similar News