ಚುನಾವಣೆ 2024 | ಮೋದಿ ಅವರಿಂದ ಘನತೆ, ಪ್ರಜಾಪ್ರಭುತ್ವದ ನಾಶ: ಸೋನಿಯಾ

Update: 2024-04-06 11:46 GMT

ಏಪ್ರಿಲ್‌ 6- ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ನಾಶಪಡಿಸಿದ್ದಾರೆ ಎಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಶನಿವಾರ ಆರೋಪಿಸಿದರು. 

ಜೈಪುರದಲ್ಲಿ ಚುನಾವಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಕಳೆದ 10 ವರ್ಷಗಳಲ್ಲಿ ಮೋದಿ ಸರ್ಕಾರ ನಿರುದ್ಯೋಗ, ಹಣದುಬ್ಬ ರ, ಆರ್ಥಿಕ ಬಿಕ್ಕಟ್ಟು ಮತ್ತು ಅಸಮಾನತೆಯನ್ನು ಮಾತ್ರ ಉತ್ತೇಜಿಸಿದೆ. ವಿರೋಧ ಪಕ್ಷದ ನಾಯಕರನ್ನು ಬಿಜೆಪಿಗೆ ಸೇರುವಂತೆ ಬಲವಂತ ಪಡಿಸುತ್ತಿದೆ ಎಂದು ಆರೋಪಿಸಿದರು.

ಇದು ಸರ್ವಾಧಿಕಾರ: ಇಂದು ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ನಾಶಪಡಿಸಲಾಗುತ್ತಿದೆ ಮತ್ತು ಸಂವಿಧಾನವನ್ನು ಬದಲಿಸಲು ಪಿತೂರಿ ನಡೆಸಲಾಗುತ್ತಿದೆ. ಇದು ಸರ್ವಾಧಿಕಾರ ಮತ್ತು ನಾವೆಲ್ಲರೂ ಇದಕ್ಕೆ ಉತ್ತರ ನೀಡುತ್ತೇವೆ. ತನ್ನನ್ನು ಶ್ರೇಷ್ಠ ಎಂದು ಪರಿಗಣಿಸಿ, ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ಛಿದ್ರಗೊಳಿಸುತ್ತಿದ್ದಾರೆ,ʼ ಎಂದರು.

ಕೇಜ್ರಿವಾಲ್‌, ಸೊರೇನ್‌ ಬಂಧನಕ್ಕ ಖಂಡನೆ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಬಂಧನವನ್ನು ಖಂಡಿಸಿದರು.

ʻಮೋದಿಯವರ ಆಡಳಿತದಲ್ಲಿ ಪ್ರತಿಪಕ್ಷಗಳು ದಾಳಿಗೆ ಒಳಗಾಗಿವೆ. ನಿರುದ್ಯೋಗ ಮತ್ತು ಹಣದುಬ್ಬರ ಉತ್ತುಂಗದಲ್ಲಿದೆ. ಪ್ರತಿ ರಾಜ್ಯದಲ್ಲೂ ಪ್ರಶ್ನೆಪತ್ರಿಕೆಗಳ ಸೋರಿಕೆ ನಡೆಯುತ್ತಿದೆ. ಬಡವರು ಮತ್ತು ರೈತರನ್ನು ಯಾರೂ ಕೇಳುತ್ತಿಲ್ಲʼ ಎಂದು ಹೇಳಿದರು.

Tags:    

Similar News