ಮಾನಹಾನಿಕರ ವೀಡಿಯೊ ಮರುಟ್ವೀಟ್ ಮಾಡಿ ತಪ್ಪು ಮಾಡಿದ್ದೇನೆ: ತಪ್ಪೊಪ್ಪಿಕೊಂಡ ಕೇಜ್ರಿವಾಲ್

ಬಿಜೆಪಿ ಐಟಿ ಸೆಲ್‌ಗೆ ಸಂಬಂಧಿಸಿದ ಮಾನಹಾನಿಕರ ವಿಡಿಯೋವನ್ನು ರೀಟ್ವೀಟ್‌ ಮಾಡುವ ಮೂಲಕ ತಪ್ಪು ಮಾಡಿದ್ದೇನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ತಪ್ಪು ಒಪ್ಪಿಕೊಂಡಿದ್ದಾರೆ.

Update: 2024-02-26 13:21 GMT

ಬಿಜೆಪಿ ಐಟಿ ಸೆಲ್‌ಗೆ ಸಂಬಂಧಿಸಿದ ಮಾನಹಾನಿಕರ ವಿಡಿಯೋವನ್ನು ರೀಟ್ವೀಟ್‌ ಮಾಡುವ ಮೂಲಕ ತಪ್ಪು ಮಾಡಿದ್ದೇನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ತಪ್ಪು ಒಪ್ಪಿಕೊಂಡಿದ್ದಾರೆ.

ಕೇಜ್ರಿವಾಲ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ, ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ದೀಪಂಕರ್‌ ದತ್ತಾ ಅವರ ಪೀಠಕ್ಕೆ ʼʼ ಇದು ತಪ್ಪು ಎಂದು ಒಪ್ಪಿಕೊಳ್ಳಲು ನನಗೆ ಯಾವುದೇ ತೊಂದರೆ ಇಲ್ಲʼʼ ಎಂದು ಕೇಜ್ರಿವಾಲ್‌ ಪರವಾಗಿ ತಿಳಿಸಿದರು. ಕೇಜ್ರಿವಾಲ್‌ ತಪ್ಪನ್ನು ಒಪ್ಪಿಕೊಂಡ ಮೇಲೆ ಪ್ರಕರಣವನ್ನು ಕೈಬಿಡುವಂತೆ ಪ್ರಕರಣದ ದೂರುದಾರರಿಗೆ ಸುಪ್ರೀಂ ಕೋರ್ಟ್‌ ಹೇಲಿದೆ. ದೂರುದಾರರ ಪರ ವಕೀಲ ರಾಘವ್ ಅವಸ್ಥಿ ಅವರು ಇದಕ್ಕೆ ಸಮ್ಮತಿಸಿದರು.‌

ಅಪರಾಧ ಮಾನಹಾನಿ ಪ್ರಕರಣದಲ್ಲಿ ಆರೋಪಿಯಾಗಿರುವ ಎಎಪಿ ನಾಯಕ ಕೇಜ್ರಿವಾಲ್, ತಮಗೆ ಸಮನ್ಸ್ ನೀಡಿರುವುದನ್ನು ಎತ್ತಿ ಹಿಡಿದಿರುವ ದಿಲ್ಲಿ ಹೈಕೋರ್ಟ್ ತೀರ್ಮಾನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದಿದ್ದರು. ಸಿಎಂ ಕೇಜ್ರಿವಾಲ್ ಅವರು ಕ್ಷಮಾಪಣೆ ಕೋರಿರುವ ಹಿನ್ನೆಲೆಯಲ್ಲಿ ತಮ್ಮ ದೂರು ಹಿಂದಕ್ಕೆ ಪಡೆಯಲು ಬಯಸಿದ್ದೀರಾ ಎಂದು ದೂರುದಾರರಿಗೆ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದಿಪಾಂಕರ್ ದತ್ತಾ ಅವರನ್ನು ಒಳಗೊಂಡ ನ್ಯಾಯಪೀಠ ಕೇಳಿದೆ. ಈ ಸಂಬಂಧ ಅದು ಯಾವುದೇ ನೋಟಿಸ್ ಜಾರಿ ಮಾಡಿಲ್ಲ. ಕೇಜ್ರಿವಾಲ್ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮಾರ್ಚ್ 11ಕ್ಕೆ ಮುಂದೂಡಿದೆ.

Tags:    

Similar News