'ಮೇಕ್ ಇನ್ ಇಂಡಿಯಾ'ದಿಂದ ರಫ್ತು ಹೆಚ್ಚಳ, ಆರ್ಥಿಕ ಬಲವರ್ಧನೆ: ಪ್ರಧಾನಿ

‘ಮೇಕ್ ಇನ್ ಇಂಡಿಯಾ’ ವಿವಿಧ ಕ್ಷೇತ್ರಗಳಲ್ಲಿ ರಫ್ತು ಹೆಚ್ಚಳಕ್ಕೆ ಕಾರಣವಾಗಿದೆ. ಸಾಮರ್ಥ್ಯ ನಿರ್ಮಾಣ ಮತ್ತು ಆರ್ಥಿಕತೆಯನ್ನು ಬಲಪಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.;

Update: 2024-09-25 07:36 GMT

ಹೊಸದಿಲ್ಲಿ: ತಮ್ಮ ಸರ್ಕಾರದ ಪ್ರಮುಖ ಯೋಜನೆಯಾದ ‘ಮೇಕ್ ಇನ್ ಇಂಡಿಯಾ’ ವಿವಿಧ ಕ್ಷೇತ್ರಗಳಲ್ಲಿ ರಫ್ತು ಹೆಚ್ಚಳಕ್ಕೆ ಕಾರಣವಾಗಿದೆ. ಸಾಮರ್ಥ್ಯ ನಿರ್ಮಾಣ ಮತ್ತು ಆರ್ಥಿಕತೆಯನ್ನು ಬಲಪಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

ʻಇಂದು ನಾವು ಮೇಕ್ ಇನ್ ಇಂಡಿಯಾದ 10ನೇ ವಾರ್ಷಿಕೋತ್ಸವ ಆಚರಿಸುತ್ತಿದ್ದೇವೆ. ಕಳೆದ ದಶಕದಲ್ಲಿ ಈ ಆಂದೋಲನವನ್ನು ಯಶಸ್ವಿಗೊಳಿಸಲು ಅವಿರತವಾಗಿ ಶ್ರಮಿಸುತ್ತಿರುವ ಎಲ್ಲರನ್ನೂ ನಾನು ಅಭಿನಂದಿಸುತ್ತೇನೆ. ರಾಷ್ಟ್ರವನ್ನು ಉತ್ಪಾದನೆ ಮತ್ತು ನಾವೀನ್ಯತೆಯ ಶಕ್ತಿ ಕೇಂದ್ರವನ್ನಾಗಿ ಮಾಡಲು 140 ಕೋಟಿ ಭಾರತೀಯರ ಸಾಮೂಹಿಕ ಸಂಕಲ್ಪವನ್ನು ಈ ಕಾರ್ಯಕ್ರಮ ಸೂಚಿಸುತ್ತದೆ,ʼ ಎಂದು ಎಕ್ಸ್‌ ನಲ್ಲಿ ಹೇಳಿದ್ದಾರೆ.

ʻವಿವಿಧ ಕ್ಷೇತ್ರಗಳಲ್ಲಿ ರಫ್ತು ಏರಿಕೆ, ಸಾಮರ್ಥ್ಯ ನಿರ್ಮಾಣವಾಗಿದ್ದು, ಆ ಮೂಲಕ ಆರ್ಥಿಕತೆಯನ್ನು ಬಲಪಡಿಸಿದೆ. ಭಾರತ ಸರ್ಕಾರ ಸಾಧ್ಯವಿರುವ ಎಲ್ಲ ಮಾರ್ಗಗಳ ಮೂಲಕ 'ಮೇಕ್ ಇನ್ ಇಂಡಿಯಾ' ಉಪಕ್ರಮವನ್ನು ಪ್ರೋತ್ಸಾಹಿಸಲು ಬದ್ಧವಾಗಿದೆ. ಸುಧಾರಣೆಯಲ್ಲಿ ದೇಶದ ದಾಪುಗಾಲು ಮುಂದುವರಿಯುತ್ತವೆ. ನಾವು ಆತ್ಮನಿರ್ಭರ ಮತ್ತು ವಿಕಸಿತ ಭಾರತವನ್ನು ನಿರ್ಮಿಸುತ್ತೇವೆ,ʼ ಎಂದು ಬರೆದಿದ್ದಾರೆ.

Tags:    

Similar News