ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 11 ಶಂಕಿತ ಉಗ್ರರ ಹತ್ಯೆ
ಐವರು ನಾಗರಿಕರು ಇನ್ನೂ ನಾಪತ್ತೆಯಾಗಿದ್ದಾರೆ. ಅವರನ್ನು ಉಗ್ರಗಾಮಿಗಳು ಅಪಹರಿಸಿದ್ದಾರೆಯೇ ಅಥವಾ ದಾಳಿ ಪ್ರಾರಂಭವಾದ ನಂತರ ತಲೆಮರೆಸಿಕೊಂಡಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 11 ಶಂಕಿತ ಉಗ್ರರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೊರೊಬೆಕ್ರಾ ಉಪವಿಭಾಗದ ಜಕುರಾಡೋರ್ ಕರೋಂಗ್‌ನಲ್ಲಿ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿಗೂ ಗಾಯಗಳಾಗಿವೆ ಎಂದು ಅವರು ಹೇಳಿದ್ದಾರೆ.
ಭಾರೀ ಶಸ್ತ್ರಸಜ್ಜಿತ ಉಗ್ರಗಾಮಿಗಳು ಜಕುರಾದರ್ ಕರೋಂಗ್‌ನಲ್ಲಿ ಹಲವಾರು ಅಂಗಡಿಗಳನ್ನು ಸುಟ್ಟುಹಾಕಿದರು. ಜೊತೆಗೆ ಕೆಲವು ಮನೆಗಳು ಮತ್ತು ಹತ್ತಿರದ ಸಿಆರ್‌ಪಿಎಫ್ ಶಿಬಿರದ ಮೇಲೆ ದಾಳಿ ಮಾಡಿದದ್ದರು. ನಂತರ ಗುಂಡಿನ ಚಕಮಕಿ ಆರಂಭಗೊಂಡಿತು ಎಂದು ಅವರು ಹೇಳಿದರು.
ಐವರು ನಾಗರಿಕರು ಇನ್ನೂ ನಾಪತ್ತೆಯಾಗಿದ್ದಾರೆ. ಅವರನ್ನು ಉಗ್ರಗಾಮಿಗಳು ಅಪಹರಿಸಿದ್ದಾರೆಯೇ ಅಥವಾ ದಾಳಿ ಪ್ರಾರಂಭವಾದ ನಂತರ ತಲೆಮರೆಸಿಕೊಂಡಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರ ಶವಗಳನ್ನು ಬೊರೊಬೆಕ್ರಾ ಪೊಲೀಸ್ ಠಾಣೆಗೆ ತರಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಗಾಯಗೊಂಡ ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿಯ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅವರು ತಿಳಿಸಿದ್ದಾರೆ.