ಗುಜರಾತ್‌ನ ಭರೂಚ್‌ನಲ್ಲಿ ಕೆಮಿಕಲ್ ಫ್ಯಾಕ್ಟರಿಗೆ ಬೆಂಕಿ
ಘಟನಾ ಸ್ಥಳಕ್ಕೆ ಹಲವಾರು ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.;
ಭರೂಚ್, ಗುಜರಾತ್: ಭರೂಚ್ ಜಿಲ್ಲೆಯ ಪನೋಲಿ ಜಿಐಡಿಸಿಯಲ್ಲಿರುವ 'ಸಂಘವಿ ಆರ್ಗಾನಿಕ್ಸ್ ಪ್ರೈವೇಟ್ ಲಿಮಿಟೆಡ್' ಎಂಬ ಕೆಮಿಕಲ್ ಫ್ಯಾಕ್ಟರಿಯಲ್ಲಿ ಶನಿವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಮತ್ತು ದಟ್ಟವಾದ ಕಪ್ಪು ಹೊಗೆ ಆಕಾಶದೆತ್ತರಕ್ಕೆ ಹಬ್ಬಿದ್ದು, ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಘಟನಾ ಸ್ಥಳಕ್ಕೆ ಹಲವಾರು ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣ ಮತ್ತು ಉಂಟಾದ ಹಾನಿಯ ಪ್ರಮಾಣ ಇನ್ನೂ ತಿಳಿದುಬಂದಿಲ್ಲ.
ಕೆಲವೇ ತಿಂಗಳ ಹಿಂದೆ, ಏಪ್ರಿಲ್ 2ರಂದು ಗುಜರಾತ್‌ನ ಬನಸ್ಕಾಂತಾ ಜಿಲ್ಲೆಯ ದೀಸಾದಲ್ಲಿ ನಡೆದ ಭೀಕರ ಅಗ್ನಿ ದುರಂತದ ನೆನಪು ಇನ್ನೂ ಮಾಸಿಲ್ಲ. ಗೋದಾಮಿನೊಳಗೆ ಅಕ್ರಮವಾಗಿ ನಡೆಯುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಿಂದಾಗಿ, ಮಧ್ಯಪ್ರದೇಶದ ವಲಸೆ ಕಾರ್ಮಿಕರು ಸೇರಿದಂತೆ ಕನಿಷ್ಠ 21 ಜನರು ಮೃತಪಟ್ಟಿದ್ದರು. ಅಂದು ನಡೆದ ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಮನೆಗಳು ನಲುಗಿದ್ದವು. ಪರವಾನಗಿ ಇಲ್ಲದೆ ಮತ್ತು ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ಕಾರ್ಖಾನೆಯನ್ನು ನಡೆಸಲಾಗುತ್ತಿತ್ತು ಎಂದು ಪೊಲೀಸರು ತನಿಖೆಯಿಂದ ಬಹಿರಂಗಪಡಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಕಾರ್ಖಾನೆಯ ಮಾಲೀಕ ಖುಬ್‌ಚಂದ್ ಠಕ್ಕರ್ ಮತ್ತು ಅವರ ಮಗನನ್ನು ಬಂಧಿಸಲಾಗಿತ್ತು.