ದೆಹಲಿ-ಎನ್‌ಸಿಆರ್‌ನಲ್ಲಿ ಕಂಪನದ ಅನುಭವ; ಫರಿದಾಬಾದ್‌ನಲ್ಲಿ 3.2 ತೀವ್ರತೆಯ ಭೂಕಂಪ

ಭೂಕಂಪನದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ತಕ್ಷಣಕ್ಕೆ ಯಾವುದೇ ವರದಿಯಾಗಿಲ್ಲ.;

Update: 2025-07-22 04:19 GMT

ಮಂಗಳವಾರ ಬೆಳಿಗ್ಗೆ (ಜುಲೈ 22) ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದ (ಎನ್‌ಸಿಆರ್) ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರದ (National Centre for Seismology) ಪ್ರಕಾರ, ಇದು ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆಯ ಭೂಕಂಪವಾಗಿದ್ದು, ಇದರ ಕೇಂದ್ರಬಿಂದು ಹರಿಯಾಣದ ಫರಿದಾಬಾದ್ ಆಗಿತ್ತು.

ಈ ಭೂಕಂಪವು ಬೆಳಿಗ್ಗೆ 6 ಗಂಟೆಗೆ ಸಂಭವಿಸಿದೆ ಎಂದು ವರದಿಯಾಗಿದೆ. ಭೂಮಿಯ ಮೇಲ್ಮೈಯಿಂದ 5 ಕಿಲೋಮೀಟರ್ ಆಳದಲ್ಲಿ, 28.29 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 72.21 ಡಿಗ್ರಿ ಪೂರ್ವ ರೇಖಾಂಶದಲ್ಲಿ ಇದರ ಕೇಂದ್ರವನ್ನು ಗುರುತಿಸಲಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.

ಭೂಕಂಪನದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ತಕ್ಷಣಕ್ಕೆ ಯಾವುದೇ ವರದಿಯಾಗಿಲ್ಲ. 

Tags:    

Similar News