ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್‌ ಮರುನೇಮಕ

Update: 2024-06-13 12:54 GMT

ನವದೆಹಲಿ, ಜೂನ್ 13- ಮಾಜಿ ಐಪಿಎಸ್ ಅಧಿಕಾರಿ ಅಜಿತ್ ದೋವಲ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ)ರಾಗಿ ಮರು ನೇಮಕ ಮಾಡಲಾಗಿದೆ.

ʻಜೂನ್‌ 10, 2024 ರಿಂದ ಜಾರಿಗೆ ಬರುವಂತೆ ಅಜಿತ್ ದೋವಲ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ನೇಮಿಸಲು ಸಂಪುಟದ ನೇಮಕ ಸಮಿತಿ ಅನುಮೋದನೆ ನೀಡಿದೆ,ʼ ಎಂದು ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ. ಅವರ ನೇಮಕವು ಪ್ರಧಾನಿ ನರೇಂದ್ರ ಮೋದಿಯವರ ಅವಧಿಯೊಂದಿಗೆ ಅಂತ್ಯಗೊಳ್ಳಲಿದೆ ಅಥವಾ ಮುಂದಿನ ಆದೇಶದವರೆಗೆ ಮುಂದುವರಿಯಲಿದೆ ಎಂದು ಸರ್ಕಾರ ಹೇಳಿದೆ. 

ಅವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನಿಗದಿಪಡಿಸಲಾಗಿದೆ. ನೇಮಕ ನಿಯಮಗಳು ಮತ್ತು ಷರತ್ತುಗಳನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು ಎಂದು ಆದೇಶ ಹೇಳಿದೆ.

Tags:    

Similar News