ದೂರದೃಷ್ಟಿಯ ಬಜೆಟ್ ಎಂದ ಮೋದಿ: ಕುರ್ಚಿ ಉಳಿಸಿಕೊಳ್ಳುವ ಬಜೆಟ್ ಎಂದ ರಾಹುಲ್

Update: 2024-07-23 04:43 GMT
Live Updates - Page 5
2024-07-23 06:42 GMT

ಉದ್ಯೋಗ ಮತ್ತು ಕೌಶಲ್ಯಕ್ಕಾಗಿ ಪ್ರಧಾನ ಮಂತ್ರಿಯವರ 3 ಯೋಜನೆಗಳು

2024-07-23 06:41 GMT

ಮುದ್ರಾ ಸಾಲದ ಮಿತಿಯನ್ನು 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಿಸಲಾಗಿದೆ

2024-07-23 06:38 GMT

26,000 ಕೋಟಿ ವೆಚ್ಚದಲ್ಲಿ ರಸ್ತೆ ಸಂಪರ್ಕ ಯೋಜನೆಗಳಾದ ಪಾಟ್ನಾ-ಪೂರ್ಣಿಯಾ ಎಕ್ಸ್‌ಪ್ರೆಸ್‌ವೇ, ಬಕ್ಸರ್-ಭಾಗಲ್ಪುರ್ ಹೆದ್ದಾರಿ, ಬೋಧಗಯಾ-ರಾಜ್‌ಗೀರ್-ವೈಶಾಲಿ-ದರ್ಭಾಂಗ ಮತ್ತು ಬಕ್ಸಾರ್‌ನಲ್ಲಿ ಗಂಗಾ ನದಿಯ ಮೇಲೆ ಹೆಚ್ಚುವರಿ ದ್ವಿಪಥ ಸೇತುವೆಯ ಅಭಿವೃದ್ಧಿಗೆ ನಾವು ಬೆಂಬಲ ನೀಡುತ್ತೇವೆ.

2024-07-23 06:37 GMT

ಆಂಧ್ರಪ್ರದೇಶದ ರಾಜಧಾನಿ ಅಭಿವೃದ್ಧಿಗಾಗಿ ಸರ್ಕಾರವು ಈ ಹಣಕಾಸು ವರ್ಷ ಮತ್ತು ಮುಂದಿನ ವರ್ಷಗಳಲ್ಲಿ 15,000 ಕೋಟಿ ರೂ. ಆರ್ಥಿಕ ನೆರವು ನೀಡಲಾಗುವುದು: ನಿರ್ಮಲಾ ಸೀತಾರಾಮನ್

2024-07-23 06:34 GMT

ಬಜೆಟ್‌ನ 9 ಆದ್ಯತೆಗಳು

2024-07-23 06:31 GMT

ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ 1.52 ಲಕ್ಷ ಕೋಟಿ ರೂ. ಘೋಷಣೆ ಮಾಡಲಾಗಿದೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು: ನಿರ್ಮಲಾ ಸೀತಾರಾಮನ್

2024-07-23 06:29 GMT

ಸರ್ಕಾರವು ಪ್ರತಿ ವರ್ಷ ಒಂದು ಲಕ್ಷ ವಿದ್ಯಾರ್ಥಿಗಳಿಗೆ ನೇರವಾಗಿ ಇ-ವೋಚರ್‌ಗಳನ್ನು ನೀಡಲಿದ್ದು, ಇದರಲ್ಲಿ ಸಾಲದ ಮೊತ್ತದ ಮೇಲೆ ಶೇಕಡಾ ಮೂರರಷ್ಟು ಬಡ್ಡಿ ಸಬ್ಸಿಡಿ ನೀಡಲಾಗುತ್ತದೆ: ನಿರ್ಮಲಾ ಸೀತಾರಾಮನ್

2024-07-23 06:28 GMT

5 ವರ್ಷಗಳಲ್ಲಿ 4.1 ಕೋಟಿ ಯುವಕರಿಗೆ ಉದ್ಯೋಗ, ಕೌಶಲ್ಯ ಮತ್ತು ಇತರ ಅವಕಾಶಗಳನ್ನು ಒದಗಿಸುವ 5 ಯೋಜನೆಗಳು ಮತ್ತು ಉಪಕ್ರಮಗಳಿಗೆ ಪ್ರಧಾನ ಮಂತ್ರಿಗಳ ಪ್ಯಾಕೇಜ್ ಅನ್ನು ಘೋಷಿಸಲು ಸಂತೋಷವಾಗಿದೆ. ಈ ವರ್ಷ ನಾವು ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಕ್ಕಾಗಿ 1.48 ಲಕ್ಷ ಕೋಟಿ ರೂ. ನೀಡಲಿದ್ದೇವೆ:

2024-07-23 06:27 GMT

ಉದ್ಯೋಗ ಮಾರುಕಟ್ಟೆಗೆ ಪ್ರವೇಶಿಸುವ 30 ಲಕ್ಷ ಯುವಕರಿಗೆ ಸರ್ಕಾರ ಒಂದು ತಿಂಗಳ ಪಿಎಫ್ ಕೊಡುಗೆ ನೀಡುವ ಮೂಲಕ ಪ್ರೋತ್ಸಾಹಿಸಲಿದೆ.

2024-07-23 06:26 GMT

ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರ ರಾಷ್ಟ್ರೀಯ ಸಹಕಾರ ನೀತಿಯನ್ನು ತರಲಾಗುವುದು: ನಿರ್ಮಲಾ ಸೀತಾರಾಮನ್

Tags:    

Similar News