ರಕ್ಷಣೆ, ಆರ್ಥಿಕ ಮತ್ತು ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ ರಚನೆ

ಮೋದಿ ಸರ್ಕಾರವು ರಕ್ಷಣೆ, ಆರ್ಥಿಕ ಮತ್ತು ರಾಜಕೀಯ ವ್ಯವಹಾರಗಳ ಕುರಿತು ದೇಶದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ವಿವಿಧ ಕ್ಯಾಬಿನೆಟ್ ಸಮಿತಿಗಳನ್ನು ರಚಿಸಿದೆ.

Update: 2024-07-03 13:51 GMT
ನವದೆಹಲಿಯ ಸಂಸತ್ ಭವನದಲ್ಲಿ ರಾಜ್ಯಸಭೆಯ 264 ನೇ ಅಧಿವೇಶನದ ಮುಕ್ತಾಯದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿದರು.

ರಕ್ಷಣೆ, ಆರ್ಥಿಕ ಮತ್ತು ರಾಜಕೀಯ ವ್ಯವಹಾರಗಳ ಕುರಿತು ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ  ಕ್ಯಾಬಿನೆಟ್ ಸಮಿತಿಗಳನ್ನು ಮೋದಿ ಸರ್ಕಾರ ಬುಧವಾರ ರಚಿಸಿದೆ.

ಅಧಿಕೃತ ಅಧಿಸೂಚನೆ ಪ್ರಕಾರ, ಭದ್ರತೆಯ ಕ್ಯಾಬಿನೆಟ್ ಸಮಿತಿಯು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಒಳಗೊಂಡಿದೆ. 

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಪ್ರಧಾನಿ ಮೋದಿ ಅವರಲ್ಲದೆ, ರಕ್ಷಣಾ ಸಚಿವ, ಗೃಹ ಸಚಿವ, ಹಣಕಾಸು ಸಚಿವ, ವಿದೇಶಾಂಗ ವ್ಯವಹಾರಗಳ ಸಚಿವ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಭಾರೀ ಕೈಗಾರಿಕೆಗಳು ಮತ್ತು ಉಕ್ಕು ಸಚಿವ ಎಚ್‌.ಡಿ. ಕುಮಾರಸ್ವಾಮಿ ಇದ್ದಾರೆ. 

ಸಮಿತಿಯಲ್ಲಿರುವ ಇತರರೆಂದರೆ, ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಪಂಚಾಯತ್ ರಾಜ್ ಮತ್ತು ಮೀನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಾಲನ್ ಸಿಂಗ್. 

ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ರಕ್ಷಣಾ ಸಚಿವ, ಗೃಹ ಸಚಿವ, ಹಣಕಾಸು ಸಚಿವ, ಪಂಚಾಯತ್ ರಾಜ್ ಸಚಿವ, ಆರೋಗ್ಯ ಸಚಿವ ಜೆ.ಪಿ. ನಡ್ಡಾ, ಸಾಮಾಜಿಕ ನ್ಯಾಯ ಸಚಿವ ವೀರೇಂದ್ರ ಕುಮಾರ್, ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು, ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಾಮ್, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಇದ್ದಾರೆ.

ಸಮಿತಿಯಲ್ಲಿ ವಿಶೇಷ ಆಹ್ವಾನಿತರು ಕೇಂದ್ರ ಕಾನೂನು ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಅರ್ಜುನ್ ರಾಮ್ ಮೇಘವಾಲ್ ಮತ್ತು ಕಾನೂನು ರಾಜ್ಯ ಸಚಿವ ಎಲ್. ಮುರುಗನ್.

Tags:    

Similar News