ಮಿಜೋರಾಂ, ಮಣಿಪುರಕ್ಕೆ ಇಂದು ಮೋದಿ ಭೇಟಿ: ಐಜ್ವಾಲ್‌ಗೆ ಆಗಮಿಸಿದ ಪ್ರಧಾನಿ

ಐಜ್ವಾಲ್‌ನಿಂದ ಪ್ರಧಾನಿ ಮೋದಿ ಅವರು ಮಣಿಪುರಕ್ಕೆ ತೆರಳಲಿದ್ದು, ಚುರಚಂದ್‌ಪುರದಲ್ಲಿ 7,300 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.;

Update: 2025-09-13 04:40 GMT

ಸುಮಾರು 237 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಮತ್ತು ಸುತ್ತಮುತ್ತ ರಾಜ್ಯ ಮತ್ತು ಕೇಂದ್ರ ಪಡೆಗಳ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿತ್ತು.

Click the Play button to listen to article

ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೆಪ್ಟೆಂಬರ್ 13) ಮಿಜೋರಾಂನ ಐಜ್ವಾಲ್‌ಗೆ ಆಗಮಿಸಿದ್ದು, 9,000 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಅವರು ಸಾರ್ವಜನಿಕ ಸಭೆಯನ್ನೂ ಉದ್ದೇಶಿಸಿ ಮಾತನಾಡಲಿದ್ದಾರೆ.

ಐಜ್ವಾಲ್‌ನಿಂದ ಪ್ರಧಾನಿ ಮೋದಿ ಅವರು ಮಣಿಪುರಕ್ಕೆ ತೆರಳಲಿದ್ದು, ಚುರಚಂದ್‌ಪುರದಲ್ಲಿ 7,300 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮೇ 2023 ರಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಪ್ರಧಾನಿ ಮೋದಿಯವರ ಮೊದಲ ಮಣಿಪುರ ಭೇಟಿ ಇದಾಗಿದೆ.

ಅವರು ಚುರಚಂದ್‌ಪುರ ಮತ್ತು ಇಂಫಾಲ್‌ನಲ್ಲಿ ಆಂತರಿಕವಾಗಿ ಸ್ಥಳಾಂತರಗೊಂಡ ಜನರೊಂದಿಗೆ ಸಂವಾದ ನಡೆಸಲಿದ್ದಾರೆ. ಇಂಫಾಲ್‌ನಲ್ಲಿ 1,200 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಿವಿಧ ಯೋಜನೆಗಳನ್ನು ಉದ್ಘಾಟಿಸಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಮೋದಿ ಭೇಟಿ ಹಿನ್ನೆಲೆಯಲ್ಲಿ ಇಂಫಾಲ್ ಮತ್ತು ಚುರಚಂದ್‌ಪುರ ಜಿಲ್ಲಾ ಕೇಂದ್ರಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪ್ರಧಾನಿ ರ‍್ಯಾಲಿ ನಡೆಯುವ ಸ್ಥಳಗಳಾದ ಇಂಫಾಲ್‌ನ ಸುಮಾರು 237 ಎಕರೆ ವಿಸ್ತೀರ್ಣದ ಕಾಂಗ್ಲಾ ಕೋಟೆ ಮತ್ತು ಚುರಚಂದ್‌ಪುರದ ಪೀಸ್ ಗ್ರೌಂಡ್ ಸುತ್ತಮುತ್ತ ರಾಜ್ಯ ಮತ್ತು ಕೇಂದ್ರ ಪಡೆಗಳ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ.

ಇದರ ನಂತರ ಮೋದಿ ಅವರು ಅಸ್ಸಾಂಗೆ ಭೇಟಿ ನೀಡಿ ಗುವಾಹಟಿಯಲ್ಲಿ ನಡೆಯಲಿರುವ ಡಾ. ಭೂಪೇನ್ ಹಜಾರಿಕಾ ಅವರ 100ನೇ ಜನ್ಮದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

Tags:    

Similar News