ನೇಪಾಳದ ಹಂಗಾಮಿ ಪ್ರಧಾನಿ ಕಾರ್ಕಿಗೆ ಮೋದಿ ಶುಭ ಹಾರೈಕೆ; ನೇಪಾಳದ ಶಾಂತಿಗೆ ಭಾರತ ಬದ್ಧ
ನೆರೆಯ ರಾಷ್ಟ್ರವಾದ ನೇಪಾಳದ ಜನರ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗೆ ಭಾರತ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.;
ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರು 73 ವರ್ಷದ ಕರ್ಕಿ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಬೋಧಿಸಿದರು.
ನೇಪಾಳದ ಹಂಗಾಮಿ ಸರ್ಕಾರದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಶೀಲಾ ಕಾರ್ಕಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಸೆಪ್ಟೆಂಬರ್ 13) ಅಭಿನಂದನೆ ಸಲ್ಲಿಸಿದ್ದಾರೆ. ನೆರೆಯ ರಾಷ್ಟ್ರವಾದ ನೇಪಾಳದ ಜನರ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗೆ ಭಾರತ ಬದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.
ಸಾಮಾಜಿಕ ಜಾಲತಾಣ 'ಎಕ್ಸ್' ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, "ನೇಪಾಳದ ಹಂಗಾಮಿ ಸರ್ಕಾರದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿರುವ ಗೌರವಾನ್ವಿತ ಶ್ರೀಮತಿ ಸುಶೀಲಾ ಕಾರ್ಕಿ ಅವರಿಗೆ ನನ್ನ ಶುಭಾಶಯಗಳು. ನೇಪಾಳದ ಜನರ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗೆ ಭಾರತ ದೃಢವಾಗಿ ಬದ್ಧವಾಗಿದೆ," ಎಂದು ಬರೆದುಕೊಂಡಿದ್ದಾರೆ.
ಮಾಜಿ ಮುಖ್ಯ ನ್ಯಾಯಮೂರ್ತಿಯಾದ ಸುಶೀಲಾ ಕಾರ್ಕಿ ಅವರು ಶುಕ್ರವಾರ ನೇಪಾಳದ ಮೊದಲ ಮಹಿಳಾ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ವ್ಯಾಪಕ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರ ಹಠಾತ್ ರಾಜೀನಾಮೆಯಿಂದ ಉಂಟಾಗಿದ್ದ ರಾಜಕೀಯ ಅನಿಶ್ಚಿತತೆಗೆ ಈ ಮೂಲಕ ತೆರೆಬಿದ್ದಿದೆ. ಅಧ್ಯಕ್ಷರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ, ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರು 73 ವರ್ಷದ ಕಾರ್ಕಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.