Neeraj Chopra| 90.23 ಮೀ. ಜಾವೆಲಿನ್ ಎಸೆದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ದೋಹಾ ಡೈಮಂಡ್ ಲೀಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದರೂ ನೀರಜ್ ಚೋಪ್ರಾ ಅವರು ಚಿನ್ನದ ಪದಕದಿಂದ ವಂಚಿತರಾಗಿದ್ದಾರೆ. ಆದರೆ, 90 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಅತ್ಯುತ್ತಮ ವೈಯಕ್ತಿಕ ಸಾಧನೆ ಮಾಡಿದ್ದಾರೆ.;
ನೀರಜ್ ಚೋಪ್ರಾ
ದೇಶದ ಚಿನ್ನದ ಹುಡುಗ ನೀರಜ್ ಚೋಪ್ರಾ ಅವರು ದೋಹಾ ಡೈಮಂಡ್ ಲೀಗ್ -2025 ರಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಜಾವೆಲಿನ್ ಥ್ರೋನಲ್ಲಿ ಮೊದಲ ಬಾರಿಗೆ 90 ಮೀಟರ್ ದಾಟುವ ಮೂಲಕ ವೈಯಕ್ತಿಕವಾದ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಶುಕ್ರವಾರ ದೋಹಾದಲ್ಲಿ ನಡೆದ ಡೈಮಂಡ್ ಲೀಗ್‌ನಲ್ಲಿ ಬರೋಬ್ಬರಿ 90.23 ಮೀಟರ್ ದೂರ ಜಾವೆಲಿನ್ ಎಸೆದು ಈ ಸಾಧನೆ ಮಾಡಿದ್ದಾರೆ. ಆದರೆ, ಇದೇ ಲೀಗ್‌ನಲ್ಲಿ ಜರ್ಮನಿಯ ಜೂಲಿಯನ್ ವೆಬರ್ 91.06 ಮೀಟರ್ ಎಸೆದು ಚಿನ್ನ ಗೆದ್ದರು. ವೈಯಕ್ತಿಕವಾಗಿ ಅದ್ಭುತ ಪ್ರದರ್ಶನ ನೀಡಿದರೂ ನೀರಜ್ ಚೋಪ್ರಾ ಅವರು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.
ಎರಡು ಬಾರಿ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದಿರುವ ನೀರಜ್ ಚೋಪ್ರಾ ಅವರು ದೋಹಾ ಡೈಮಂಡ್ ಲೀಗ್‌ನಲ್ಲಿ 90 ಮೀಟರ್‌ಗಿಂತ ಹೆಚ್ಚು ದೂರು ಜಾವೆಲಿನ್ ಎಸೆದ ಮೊದಲ ಭಾರತೀಯ ಅನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಂತಹ ಸಾಧನೆ ಮಾಡಿದ ವಿಶ್ವದ 25ನೇ ಆಟಗಾರ ಹಾಗೂ ಏಷ್ಯಾದ ಮೂರನೇ ಆಟಗಾರ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ.
ದೋಹಾ ಡೈಮಂಡ್ ಲೀಗ್‌ನಲ್ಲಿ ಭಾರತದ ನಾಲ್ವರು ಆಟಗಾರರು ಭಾಗವಹಿಸಿದ್ದರು. ನೀರಜ್ ಚೋಪ್ರಾ ಜೊತೆ ಕಿಶೋರ್ ಜೆನಾ ಕೂಡ ಜಾವೆಲಿನ್ ಎಸೆತದಲ್ಲಿ ಸ್ಪರ್ಧಿಸಿದರೂ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ. ಗುಲ್ವೀರ್ ಸಿಂಗ್ 5000 ಮೀಟರ್ ಓಟದಲ್ಲಿ ಭಾಗವಹಿಸಲಿದ್ದಾರೆ. ಪಾರುಲ್ ಚೌಧರಿ ಮಹಿಳೆಯರ 3000 ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ಸ್ಪರ್ಧಿಸಿದ್ದಾರೆ.