ಹೊಸದಿಲ್ಲಿ - ನೀಟ್ ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ 13 ಮಂದಿಯನ್ನು ಆರೋಪಿಗಳೆಂದು ಹೆಸರಿಸಿರುವ ಸಿಬಿಐ, ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಬಿಐ ತನಿಖೆಯನ್ನು ಮುಕ್ತವಾಗಿ ಇರಿಸಿದೆ. ಆರೋಪಿಗಳು ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಇತರ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂದು ವಿವರಿಸಲಾಗಿದೆ ಎಂದು ಹೇಳಿದರು.
ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಕೇಂದ್ರ ತನಿಖಾ ಸಂಸ್ಥೆಯು ಬಿಹಾರದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ, ಗುಜರಾತ್, ರಾಜಸ್ಥಾನ ಮತ್ತು ಮಹಾರಾಷ್ಟ್ರದಲ್ಲಿ ನಕಲಿ ಗುರುತಿನಲ್ಲಿ ಪರೀಕ್ಷೆ ಬರೆದಿರುವುದು ಮತ್ತು ವಂಚನೆ ಪ್ರಕರಣದಲ್ಲಿ ಆರು ಎಫ್‌ಐಆರ್ ದಾಖಲಿಸಿದೆ.
ನೀಟ್-ಯುಜಿ ಪರೀಕ್ಷೆಯನ್ನು ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಎಂಬಿಬಿಎಸ್, ಬಿಡಿಎಸ್, ಆಯುಷ್ ಮತ್ತು ಇತರ ಸಂಬಂಧಿತ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಎನ್‌ಟಿಎ ನಡೆಸುತ್ತದೆ. ಈ ವರ್ಷ ಮೇ 5 ರಂದು ವಿದೇಶದಲ್ಲಿ 14 ಸೇರಿದಂತೆ 571 ನಗರಗಳ 4,750 ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ 23 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪಾಲ್ಗೊಂಡಿದ್ದರು.