NEET-UG 2024 ಹಗರಣ| ಸಿಬಿಐಯಿಂದ ಮೊದಲ ಬಂಧನ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಬಿಐ ಆರು ಎಫ್‌ಐಆರ್‌ಗಳನ್ನು ದಾಖಲಿಸಿದೆ.

Update: 2024-06-27 10:45 GMT

ನೀಟ್-‌ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ)ವು ಬಿಹಾರದ ಪಾಟ್ನಾದಿಂದ ಇಬ್ಬರನ್ನು ಬಂಧಿಸಿದೆ.

ಮನೀಷ್ ಕುಮಾರ್ ಮತ್ತು ಅಶುತೋಷ್ ಕುಮಾರ್ ಬಂಧಿತರು. ಇವರು ಪರೀಕ್ಷೆಗೆ ಮುನ್ನ ಅಭ್ಯರ್ಥಿಗಳಿಗೆ ಸುರಕ್ಷಿತ ನೆಲೆಯನ್ನು ಒದಗಿಸಿದ್ದು, ಸೋರಿಕೆಯಾದ ಪ್ರಶ್ನೆಪತ್ರಿಕೆಗಳು ಮತ್ತು ಉತ್ತರಗಳನ್ನು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ನೀಟ್ ಪ್ರಶ್ನೆಪೇಪರ್ ಸೋರಿಕೆ ಪ್ರಕರಣದಲ್ಲಿ ಸಿಬಿಐ ಆರು ಎಫ್‌ಐಆರ್‌ಗಳನ್ನು ದಾಖಲಿಸಿದೆ. 

ನೀಟ್-ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ ಟಿಎ)ಯು ದೇಶಾದ್ಯಂತ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಎಂಬಿಬಿ‌ ಎಸ್,ಬಿಡಿಎಸ್, ಆಯುಷ್ ಮತ್ತು ಇತರ ಸಂಬಂಧಿತ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುತ್ತದೆ. ಈ ವರ್ಷ ಮೇ 5 ರಂದು 14 ವಿದೇಶ ಸೇರಿದಂತೆ 571 ನಗರಗಳ 4,750 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. 23 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆಯಲ್ಲಿ ಅಕ್ರಮಗಳ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿದ ಒಂದು ದಿನದ ನಂತರ ಭಾನುವಾರ ಮೊದಲ ಎಫ್‌ಐಆರ್ ದಾಖಲಿಸಲಾಯಿತು.

Tags:    

Similar News