NEET-UG ಅಕ್ರಮ ಪ್ರಕರಣ: ಎಫ್‌ಐಆರ್ ದಾಖಲಿಸಿಕೊಂಡ ಸಿಬಿಐ

Update: 2024-06-23 11:32 GMT

ಮೇ 5 ರಂದು ನಡೆದ ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG 2024ರಲ್ಲಿನ ಅಕ್ರಮಗಳ ಸಮಗ್ರ ತನಿಖೆಗಾಗಿ ಶಿಕ್ಷಣ ಸಚಿವಾಲಯ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಿದೆ.

ವೈದ್ಯಕೀಯ ಪ್ರವೇಶಾತಿ ಪರೀಕ್ಷೆಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ಕೂಗು ಜೋರಾಗಿ ಕೇಳಿಬರುತ್ತಿದ್ದಂತೆ ಸಚಿವಾಲಯ ಮಹತ್ವದ ನಿರ್ಧಾರ ಕೈಗೊಂಡಿದೆ.

ಕೇಂದ್ರ ಶಿಕ್ಷಣ ಸಚಿವಾಲಯದ ಉಲ್ಲೇಖದ ಮೇರೆಗೆ ಸಿಬಿಐ ಅಪರಿಚಿತ ವ್ಯಕ್ತಿಗಳ ವಿರುದ್ಧ ಹೊಸ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು 24 ಲಕ್ಷ ವಿದ್ಯಾರ್ಥಿಗಳು ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಅಭ್ಯರ್ಥಿಗಳಾಗಿದ್ದಾರೆ.

NEET ಪರೀಕ್ಷೆಯ ಅಕ್ರಮದ ವಿರುದ್ಧ ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಬೇಡಿಕೆಗಳಿಗೆ ಸಚಿವಾಲಯವು ಮಣಿಯಬೇಕಾಗಿದೆ ಎಂದು ಾಧಿಕಾರಿಗಳು ಹೇಳಿದರು.

ಮೇ 5ರಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ NEET -UG ಪರೀಕ್ಷೆ ನಡೆಸಿತ್ತು. ಇದಾದ ಬಳಿಕ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರುವುದು ಬೆಳಕಿಗೆ ಬಂದಿದೆ. ಇದೀಗ ಪಾರದರ್ಶಕ ತನಿಖೆಗಾಗಿ ಕೇಂದ್ರ ಶಿಕ್ಷಣ ಸಚಿವಾಲಯ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿದೆ.

ಸಾರ್ವಜನಿಕ ಪರೀಕ್ಷೆಗಳಲ್ಲಿನ ಅಕ್ರಮ ತಡೆಗಟ್ಟಲು ಮತ್ತು ಪರೀಕ್ಷೆಗೆ ಸಂಬಂಧಿಸಿದ ವಿಷಯಗಳಿಗೆ ನಿಬಂಧನೆಗಳನ್ನು ರಚಿಸಲು ಕೇಂದ್ರವು ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆ, 2024 ಅನ್ನು ಕೂಡಾ ಜಾರಿಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.

Tags:    

Similar News