NEET-UG Scam| ಸುಪ್ರೀಂನಿಂದ ಜುಲೈ 8 ರಿಂದ ಅರ್ಜಿಗಳ ವಿಚಾರಣೆ

ಮೇ 5 ರಂದು ನಡೆದ ನೀಟ್-ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತ 26 ಅರ್ಜಿಗಳನ್ನು ಜುಲೈ 8 ರಂದು ಸುಪ್ರೀಂ ಕೋರ್ಟ್ ಆಲಿಸಲಿದೆ.

Update: 2024-07-02 09:53 GMT

ನೀ‌ಟ್-ಯುಜಿ ಪರೀಕ್ಷೆಯಲ್ಲಿ ಅಕ್ರಮ, ಮರುಪರೀಕ್ಷೆಗೆ ಕೋರಿಕೆ ಸೇರಿದಂತೆ ಸರಣಿ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ (ಜುಲೈ 8)ದಿಂದ ಆಲಿಸಲಿದೆ. 

ಸುಪ್ರೀಂ ಕೋರ್ಟ್‌ನ ಜಾಲತಾಣದಲ್ಲಿರುವ ಪಟ್ಟಿ ಪ್ರಕಾರ, 26 ಅರ್ಜಿಗಳು ಮು.ನ್ಯಾ. ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠದ ಮುಂದೆ ವಿಚಾರಣೆಗೆ ಬರಲಿವೆ. 

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ-ಪದವಿಪೂರ್ವ (ನೀಟ್-ಯುಜಿ) ಯನ್ನು ವೈದ್ಯ, ಬಿಡಿಎಸ್‌, ಆಯುಷ್ ಮತ್ತು ಇತರ ಸಂಬಂಧಿತ ಕೋರ್ಸ್‌ಗಳಿಗೆ ನಡೆಸುತ್ತದೆ. ನೀಟ್-ಯುಜಿ 2024 ಮೇ 5 ರಂದು 4,750 ಕೇಂದ್ರಗಳಲ್ಲಿ ನಡೆಯಿತು ಮತ್ತು ಸುಮಾರು 24 ಲಕ್ಷ ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಫಲಿತಾಂಶವನ್ನು ಜೂನ್ 14 ರಂದು ನಿರೀಕ್ಷಿಸಲಾಗಿತ್ತು.ಆದರೆ, ಜೂನ್ 4 ರಂದು ಫಲಿತಾಂಶ ಪ್ರಕಟಿಸಲಾಯಿತು.

ಅಕ್ರಮದ ಆರೋಪ: ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮಗಳ ಆರೋಪದಿಂದ ಹಲವು ನಗರಗಳಲ್ಲಿ ಪ್ರತಿಭಟನೆ ನಡೆಯಿತು. 

ಜೂನ್ 11 ರಂದು ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಇತರ ಅಕ್ರಮದಿಂದ ಮರುಪರೀಕ್ಷೆ ಕೋರಿ ಸಲ್ಲಿಸಿದ ಮನವಿಯನ್ನು ಆಲಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಮತ್ತು ಎನ್ಟಿಎ ಯಿಂದ ಪ್ರತಿಕ್ರಿಯೆಗಳನ್ನು ಕೇಳಿತು. ಆದರೆ, ಕೌನ್ಸೆಲಿಂಗ್‌ಗೆ ತಡೆ ನೀಡಲು ನಿರಾಕರಿಸಿತು. ಜೂನ್ 18 ರಂದು ಪ್ರತ್ಯೇಕ ಅರ್ಜಿಗಳನ್ನು ಆಲಿಸಿದ ಸುಪ್ರೀಂ ಕೋರ್ಟ್, ಶೇ.0.001ರಷ್ಟು ನಿರ್ಲಕ್ಷ್ಯ ಕಂಡುಬಂದರೂ ಅದನ್ನು ಸರಿಪಡಿಸಬೇಕು ಎಂದು ಹೇಳಿತು.

ಕೃಪಾಂಕ ರದ್ದು: ಕೇಂದ್ರ ಮತ್ತು ಎನ್‌ಟಿಎ ಜೂನ್ 13 ರಂದು 1,563 ಅಭ್ಯರ್ಥಿಗಳಿಗೆ ನೀಡಲಾಗಿದ್ದ ಕೃಪಾಂಕವನ್ನು ರದ್ದುಗೊಳಿಸಿರು ವುದಾಗಿ ನ್ಯಾಯಾಲಯಕ್ಕೆ ತಿಳಿಸಿದವು. ಜೂನ್ 23 ರಂದು ನಡೆದ ಮರು ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿರುವ ಎನ್‌ಟಿಎ, ಸೋಮವಾರ ಪರಿಷ್ಕೃತ ಶ್ರೇಣಿ ಪಟ್ಟಿಯನ್ನು ಪ್ರಕಟಿಸಿದೆ. ಉನ್ನತ ಶ್ರೇಣಿಯನ್ನು ಹಂಚಿಕೊಳ್ಳುವ ಅಭ್ಯರ್ಥಿಗಳ ಸಂಖ್ಯೆ 67 ರಿಂದ 61 ಕ್ಕೆ ಇಳಿದಿದೆ.

Tags:    

Similar News