ಮುಟ್ಟಿನ ರಜೆ ಕಡ್ಡಾಯ ಪ್ರಸ್ತಾವ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
By : The Federal
Update: 2024-07-26 12:48 GMT
ಎಲ್ಲಾ ಕೆಲಸದ ಸ್ಥಳಗಳಿಗೆ ವೇತನಸಹಿತ ಮುಟ್ಟಿನ ರಜೆಯನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಪರಿಗಣನೆಯಲ್ಲಿ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಶುಕ್ರವಾರ (ಜು.26) ತಿಳಿಸಿದೆ.
ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ, 10-19 ವರ್ಷ ವಯಸ್ಸಿನ ಹದಿಹರೆಯದ ಬಾಲಕಿಯರಲ್ಲಿ ಮುಟ್ಟಿನ ನೈರ್ಮಲ್ಯವನ್ನು ಉತ್ತೇಜಿಸಲು ಸರ್ಕಾರವು ಯೋಜನೆಯನ್ನು ಜಾರಿಗೊಳಿಸುತ್ತದೆ ಎಂದರು.
ʻಪ್ರಸ್ತುತ ಎಲ್ಲಾ ಉದ್ಯೋಗ ಸಂಸ್ಥೆಗಳಲ್ಲಿ ವೇತನಸಹಿತ ಮುಟ್ಟಿನ ರಜೆಯನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲʼ ಎಂದು ಅವರು ಲಿಖಿತ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.