ವಿದ್ಯಾರ್ಥಿಗಳು ಓಡಿಸುತ್ತಿದ್ದ ಐಷಾರಾಮಿ ಕಾರು ಗುದ್ದಿ 5 ವರ್ಷದ ಬಾಲಕಿ ಸಾವು

ಐಷಾರಾಮಿ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಮದ್ಯದ ಅಮಲಿನಲ್ಲಿದ್ದರೇ ಅಥವಾ ಅಜಾಗರೂಕತೆಯಿಂದ ವಾಹನ ಚಲಾಯಿಸುತ್ತಿದ್ದರೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.;

Update: 2025-07-27 07:01 GMT

ಕಾಲೇಜು ವಿದ್ಯಾರ್ಥಿಗಳು ಅತಿವೇಗವಾಗಿ ಚಲಾಯಿಸುತ್ತಿದ್ದ ಐಷಾರಾಮಿ ಬಿಎಂಡಬ್ಲ್ಯು ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಆಸ್ಪತ್ರೆಗೆ ಚಿಕಿತ್ಸೆಗೆ ತೆರಳುತ್ತಿದ್ದ 5 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನೋಯ್ಡಾದ ಸೆಕ್ಟರ್ 30ರಲ್ಲಿ ಶನಿವಾರ ರಾತ್ರಿ ನಡೆದಿದೆ.

ಗುಲ್ ಮೊಹಮ್ಮದ್ ಎಂಬುವವರು ತಮ್ಮ ಅನಾರೋಗ್ಯ ಪೀಡಿತ 5 ವರ್ಷದ ಮಗಳನ್ನು ಸ್ಕೂಟರ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಅವರೊಂದಿಗೆ ಭಾವಮೈದ ರಾಜಾ ಕೂಡ ಇದ್ದರು. ಈ ವೇಳೆ, ಅತಿವೇಗವಾಗಿ ಬಂದ ಬಿಎಂಡಬ್ಲ್ಯು ಕಾರು ಅವರ ಸ್ಕೂಟರ್‌ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಾಲಕಿ ಸ್ಥಳದಲ್ಲೇ ಮೃತಪಟ್ಟರೆ, ಗುಲ್ ಮೊಹಮ್ಮದ್ ಮತ್ತು ರಾಜಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಆರೋಪಿಗಳ ಬಂಧನ

ಅಪಘಾತದ ನಂತರ, ಕಾರಿನಲ್ಲಿದ್ದ ಯಶ್ ಶರ್ಮಾ ಮತ್ತು ಅಭಿಷೇಕ್ ರಾವತ್ ಎಂಬ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಐಷಾರಾಮಿ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಮದ್ಯದ ಅಮಲಿನಲ್ಲಿದ್ದರೇ ಅಥವಾ ಅಜಾಗರೂಕತೆಯಿಂದ ವಾಹನ ಚಲಾಯಿಸುತ್ತಿದ್ದರೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನೋಯ್ಡಾ ಪೊಲೀಸರು ಭರವಸೆ ನೀಡಿದ್ದಾರೆ.

Tags:    

Similar News