Rahul Gandhi: ಸೇನೆ ವಿರುದ್ಧ ಹೇಳಿಕೆ; ರಾಹುಲ್ ಗಾಂಧಿಗೆ ಉತ್ತರ ಪ್ರದೇಶ ಕೋರ್ಟ್ ಸಮನ್ಸ್
Rahul Gandhi: ಬಾರ್ಡರ್ ರೋಡ್ಸ್ನ ಆರ್ಗನೈಸೇಶನ್ನ ಮಾಜಿ ನಿರ್ದೇಶಕ ಉದಯ್ ಶಂಕರ್ ಶ್ರೀವಾಸ್ತವ ಅವರ ಪರವಾಗಿ ವಕೀಲ ವಿವೇಕ್ ತಿವಾರಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.;
By : The Federal
Update: 2025-02-12 06:58 GMT
ಲಖನೌ: ಭಾರತೀಯ ಸೇನೆ ಕುರಿತು ಅನಪೇಕ್ಷಿತ ಹೇಳಿಕೆ ನೀಡಿದ ಆರೋಪದಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಉತ್ತರ ಪ್ರದೇಶದ ನ್ಯಾಯಾಲಯವು ಸಮನ್ಸ್ ಜಾರಿಮಾಡಿದೆ. ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅಲೋಕ್ ವರ್ಮಾ ಅವರು ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 24 ಕ್ಕೆ ನಿಗದಿಪಡಿಸಿದ್ದಾರೆ. ಅಂದು ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಬೇಕಾಗುತ್ತದೆ.
ರಾಹುಲ್ ಗಾಂಧಿ ಅವರು 2022ರ ಡಿಸೆಂಬರ್ 16ರಂದು ಭಾರತ್ ಜೋಡೋ ಯಾತ್ರೆ ಕೈಗೊಳ್ಳುವ ವೇಳೆ ಭಾರತೀಯ ಸೇನೆಯ ವಿರುದ್ಧ ಅನಗತ್ಯ ಹೇಳಿಕೆ ನೀಡಿದ್ದಾರೆ ಎಂದು ವಕೀಲ ವಿವೇಕ್ ತಿವಾರಿ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದ ವಿಚಾರಣೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ನಡೆಯುತ್ತಿದೆ.
ಬಾರ್ಡರ್ ರೋಡ್ಸ್ನ ಆರ್ಗನೈಸೇಶನ್ನ ಮಾಜಿ ನಿರ್ದೇಶಕ ಉದಯ್ ಶಂಕರ್ ಶ್ರೀವಾಸ್ತವ ಅವರ ಪರವಾಗಿ ವಕೀಲ ವಿವೇಕ್ ತಿವಾರಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ರಾಹುಲ್ ಗಾಂಧಿ ಹೇಳಿದ್ದೇನು?
ಭಾರತ-ಚೀನಾ ಗಡಿಯಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ರಾಹುಲ್ ಗಾಂಧಿ ಪ್ರಸ್ತಾಪಿಸಿದ್ದರು. “ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ಸೈನಿಕರು ಭಾರತೀಯ ಸೈನಿಕರಿಗೆ ಹೊಡೆಯುತ್ತಿದ್ದಾರೆ” ಎಂದು ರಾಹುಲ್ ಹೇಳಿದ್ದರು. ಇದನ್ನು ತಿವಾರಿ ಆಕ್ಷೇಪಿಸಿದ್ದರು.
ಮಾನಹಾನಿ ಹೇಳಿಕೆ ಪ್ರಕರಣದ ಹಿಂದೆ ಕೆಲ ವರ್ಷಗಳ ಹಿಂದೆ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದಾಗಿತ್ತು.