ಬ್ರಿಕ್ಸ್ ಶೃಂಗಸಭೆ | ಅ.22 - 23ರಂದು ಪ್ರಧಾನಿ ಮೋದಿ ರಷ್ಯಾ ಭೇಟಿ

ಶೃಂಗಸಭೆ ವೇಳೆ ಪ್ರಧಾನಿ ಮೋದಿ ಅವರು, ಬ್ರಿಕ್ಸ್ ಸದಸ್ಯ ರಾಷ್ಟ್ರಗಳ ಪ್ರಧಾನ ಮಂತ್ರಿಗಳು ಮತ್ತು ಕಜಾನ್‌ನಲ್ಲಿ ಆಹ್ವಾನಿತ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ.

Update: 2024-10-19 07:29 GMT
ನರೇಂದ್ರ ಮೋದಿ
Click the Play button to listen to article

ಕಜಾನ್‌ನಲ್ಲಿ ನಡೆಯಲಿರುವ 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ, ಅಕ್ಟೋಬರ್ 22 ರಿಂದ ಎರಡು ದಿನ ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ. ಬ್ರಿಕ್ಸ್ ಶೃಂಗಸಭೆ ರಷ್ಯಾದ ಅಧ್ಯಕ್ಷತೆಯಲ್ಲಿ ನಡೆಯುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ತಿಳಿಸಿದೆ.

ಶೃಂಗಸಭೆ ವೇಳೆ ಪ್ರಧಾನಿ ಮೋದಿ ಅವರು, ಬ್ರಿಕ್ಸ್ ಸದಸ್ಯ ರಾಷ್ಟ್ರಗಳ ಪ್ರಧಾನ ಮಂತ್ರಿಗಳು ಮತ್ತು ಕಜಾನ್‌ನಲ್ಲಿ ಆಹ್ವಾನಿತ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ. 'ಜಾಗತಿಕ ಅಭಿವೃದ್ಧಿ ಮತ್ತು ಭದ್ರತೆಗಾಗಿ ಬಹುಪಕ್ಷೀಯತೆಯನ್ನು ಬಲಪಡಿಸುವ' ಥೀಮ್ ನ ಶೃಂಗಸಭೆಯು ಪ್ರಮುಖ ಜಾಗತಿಕ ಸಮಸ್ಯೆಗಳನ್ನು ಚರ್ಚಿಸಲು ನಾಯಕರಿಗೆ ಪ್ರಮುಖ ವೇದಿಕೆಯನ್ನು ಒದಗಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹೇಳಿದೆ.

BRIC (ಬ್ರೆಜಿಲ್, ರಷ್ಯಾ, ಭಾರತ ಮತ್ತು ಚೀನಾ) ರಾಷ್ಟ್ರಗಳ ನಾಯಕರು 2006 ರಲ್ಲಿ ರಷ್ಯಾದ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ಮೊದಲ ಬಾರಿಗೆ ಭೇಟಿಯಾಗಿದ್ದರು. ಉನ್ನತ ಮಟ್ಟದ ಸರಣಿ ಸಭೆ ನಂತರ ರಷ್ಯಾದ ಯೆಕಟೆರಿನ್‌ಬರ್ಗ್‌ನಲ್ಲಿ 2009 ರಲ್ಲಿ ಮೊದಲ BRIC ಶೃಂಗಸಭೆ ನಡೆದಿತ್ತು.

Tags:    

Similar News