ಅಣು ಬೆದರಿಕೆ ಸಹಿಸಲ್ಲ , ಭಾರತದ ನೀರು ಶತ್ರುಗಳಿಗಿಲ್ಲ; ಸ್ವಾತಂತ್ರ್ಯೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಶಪಥ

ಶತ್ರುಗಳಿಗೆ ಕ್ಷಣಾರ್ಧದಲ್ಲಿ ಅವರನ್ನು ನಾಶಮಾಡುವ ನಮ್ಮ ಶಕ್ತಿ ತಿಳಿದಿರಲಿಲ್ಲ. ಕಳೆದ 10 ವರ್ಷಗಳಿಂದ ನಾವು ಮೇಕ್ ಇನ್ ಇಂಡಿಯಾ ಒಂದು ಧ್ಯೇಯವಾಗಿ ತೆಗೆದುಕೊಳ್ಳುತ್ತಿದ್ದೇವೆ. 21 ನೇ ಶತಮಾನವು ತಂತ್ರಜ್ಞಾನದ ಶತಮಾನ ಎಂದು‌ಮೋದಿ ಹೇಳಿದರು.;

Update: 2025-08-15 03:42 GMT

ಭಾರತದಲ್ಲಿ ಹುಟ್ಟುವ ನದಿಗಳ ನೀರಿನ ಮೇಲಿನ ಹಕ್ಕು ಭಾರತೀಯರಿಗಷ್ಟೇ‌ ಸೀಮಿತ. ಶತ್ರುಗಳಿಗಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಪರೋಕ್ಷವಾಗಿ ನೆರೆಯ ರಾಷ್ಟ್ರ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಿದರು.

ನವದರಹಲಿಯ ಕೆಂಪುಕೋಟೆಯಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವದ‌ ಅಂಗವಾಗಿ ದೇಶವನ್ನುದ್ದೇಶಿಸಿ ಮಾತನಾಡಿದರು.

ಭಾರತದಲ್ಲಿ ಹುಟ್ಟುವ ನದಿಗಳ ನೀರಿನ ಮೇಲೆ ಕೇವಲ ಭಾರತೀಯರು ಹಾಗೂ ಇಲ್ಲಿನ ರೈತರಿಗೆ ಮಾತ್ರ ಹಕ್ಕಿದೆ. ಇಷ್ಟು ವರ್ಷ ಇಲ್ಲಿನ ನೀರನ್ನು ಶತ್ರುಗಳ ಹೊಲಗಳಿಗೆ ಹರಿಸಲಾಗುತ್ತಿತ್ತು. ನಮ್ಮ ರೈತರ ಹೊಲಗಳು ನೀರಿಲ್ಲದೆ ಒಣಗುತ್ತಿದ್ದವು. ಏಳು ದಶಕಗಳಿಂದ ದೇಶದ ರೈತರಿಗೆ ಊಹಿಸಲಾಗದ ನಷ್ಟ ಉಂಟು ಮಾಡಿರುವ ಸಿಂಧೂ ನದಿ ಜಲ ಒಪ್ಪಂದ ನಮಗೆ ಅಗತ್ಯವೇ ಎಂದು ಪ್ರಶ್ನಿಸಿದರಲ್ಲದೇ ರಾಷ್ಟ್ರದ ಹಿತದೃಷ್ಟಿಯಿಂದ ಸಿಂಧೂ ಜಲ ಒಪ್ಪಂದ ರದ್ದುಗೊಳಿಸಿದ ಕ್ರಮವನ್ನು ಸಮರ್ಥಿಸಿಕೊಂಡರು. 

ಭಯೋತ್ಪಾದನೆ ಮತ್ತು ಭಯೋತ್ಪಾದನೆ ಪೋಷಿಸುವವರನ್ನು ನಾವು ಸಹಿಸುವುದಿಲ್ಲ. ಉಗ್ರರಿಗೆ ನೆರವಾಗುವವರೂ ಕೂಡ ಉಗ್ರರೇ. ಅವರ ಬಗ್ಗೆ ಕರುಣೆ ತೋರುವುದಿಲ್ಲ ಎಂದು ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದರು.

ಅಣು ಬೆದರಿಕೆಗೆ ಜಗ್ಗಲ್ಲ

ಭಾರತವು ಯಾವುದೇ ಪರಮಾಣು ಬೆದರಿಕೆ ಸಹಿಸುವುದಿಲ್ಲ, ಭವಿಷ್ಯದಲ್ಲಿ ನಮಗೆ ತೊಂದರೆ ನೀಡಬೇಕೆಂಬ ಆಲೋಚನೆ ಬಂದರೂ ಶತ್ರುಗಳಿಗೆ ಭಾರತೀಯ ಸೇನೆ ತಕ್ಕ ಉತ್ತರ ಕೊಡಲಿದೆ‌ ಎಂದು ಎಚ್ಚರಿಕೆ ನೀಡಿದರು.

ಹೊಸ ಅಣೆಕಟ್ಟುಗಳ ನಿರ್ಮಾಣ

 ಜಲವಿದ್ಯುತ್ ವಿಸ್ತರಿಸಲು ಮತ್ತು ಶುದ್ಧ ಶಕ್ತಿಯನ್ನು ಪಡೆಯಲು ನಾವು ಹೊಸ ಅಣೆಕಟ್ಟುಗಳನ್ನು ನಿರ್ಮಿಸುತ್ತಿದ್ದೇವೆ. ಇಂದು, ಭಾರತವು ಮಿಷನ್ ಗ್ರೀನ್ ಹೈಡ್ರೋಜನ್‌ನಲ್ಲಿ ಸಾವಿರಾರು ಕೋಟಿ ಹೂಡಿಕೆ ಮಾಡುತ್ತಿದೆ. ಪರಮಾಣು ಶಕ್ತಿಯಲ್ಲಿ 10 ಹೊಸ ಪರಮಾಣು ರಿಯಾಕ್ಟರ್‌ಗಳು ಕಾರ್ಯನಿರ್ವಹಿಸುತ್ತಿವೆ. 2047 ರ ವೇಳೆಗೆ, ಪರಮಾಣು ಶಕ್ತಿ ಸಾಮರ್ಥ್ಯವನ್ನು 10 ಪಟ್ಟು ಹೆಚ್ಚಿಸುವ ಸಂಕಲ್ಪದೊಂದಿಗೆ ನಾವು ಕೆಲಸ ಮಾಡುತ್ತಿದ್ದೇವೆ. ಪರಮಾಣು ಶಕ್ತಿ ಕ್ಷೇತ್ರದಲ್ಲಿ ನಾವು ದೊಡ್ಡ ಬದಲಾವಣೆಗಳನ್ನು ತರುತ್ತೇವೆ. ಖಾಸಗಿ ವಲಯಕ್ಕೆ ನಾವು ಪರಮಾಣು ಶಕ್ತಿಯ ಬಾಗಿಲುಗಳನ್ನು ತೆರೆದಿದ್ದೇವೆ ಎಂದು ಮೋದಿ ಹೇಳಿದರು.

ಆಪರೇಷನ್ ಸಿಂಧೂರ್‌ನಲ್ಲಿ ಭಾರತ ಎಷ್ಟು ಸ್ವಾವಲಂಬಿಯಾಗಿದೆ ಎಂದು ನಾವು ನೋಡಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.

ಶತ್ರುಗಳಿಗೆ ಕ್ಷಣಾರ್ಧದಲ್ಲಿ ಅವರನ್ನು ನಾಶಮಾಡುವ ನಮ್ಮ ಶಕ್ತಿ ತಿಳಿದಿರಲಿಲ್ಲ. ಕಳೆದ 10 ವರ್ಷಗಳಿಂದ ನಾವು ಮೇಕ್ ಇನ್ ಇಂಡಿಯಾ ಒಂದು ಧ್ಯೇಯವಾಗಿ ತೆಗೆದುಕೊಳ್ಳುತ್ತಿದ್ದೇವೆ. 21 ನೇ ಶತಮಾನವು ತಂತ್ರಜ್ಞಾನದ ಶತಮಾನ ಎಂದರು.

ವೋಕಲ್ ಫಾರ್ ಲೋಕಲ್

ನಾವು ಸ್ವದೇಶಿ ಉತ್ಪನ್ನಗಳನ್ನು ಬಲವಂತದಿಂದ ಅಲ್ಲ ಬದಲಾಗಿ ತಾಕತ್ತಾಗಿ ಬಳಸಬೇಕು. ವೂಕಲ್ ಫಾರ್ ಲೋಕಲ್​​ ಅನ್ನು ಎಲ್ಲಾ ಭಾರತೀಯರ ಮಂತ್ರವಾಗಿ ಮಾಡಬೇಕು.ಭಾರತದ ಜನರ ಬೆವರಿನಿಂದ ತಯಾರಿಸಿದ ಮತ್ತು ನಮ್ಮ ಜನರ ಕಠಿಣ ಪರಿಶ್ರಮದ ತಯಾರಿಸಿದ ವಸ್ತುಗಳನ್ನು ಮಾತ್ರ ನಾವು ಖರೀದಿಸಬೇಕು.ಆಗ ದೇಶವು ಕೆಲವೇ ದಿನಗಳಲ್ಲಿ ಬದಲಾಗುತ್ತದೆ.ದೇಶದ ಯುವಕರಿಗೆ ತಮ್ಮ ಆಲೋಚನೆಗಳನ್ನು ಎಂದಿಗೂ ಸಾಯಲು ಬಿಡಬೇಡಿ. ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ ಎಂದು ಭರವಸೆ ನೀಡಿದರು.

ಸೈಬರ್ ಭದ್ರತೆಯಿಂದ ಹಿಡಿದು ಕೃತಕ ಬುದ್ಧಿಮತ್ತೆಯವರೆಗೆ ಎಲ್ಲವೂ ನಮ್ಮದಾಗಿರುವುದು ಇಂದಿನ ಅಗತ್ಯವಲ್ಲವೇ? ನಮ್ಮ ಜನರ ಶಕ್ತಿ ಇದರಲ್ಲಿ ಭಾಗಿಯಾಗಬೇಕು. ಇಂದು, ಅದು ಸಾಮಾಜಿಕ ಮಾಧ್ಯಮವಾಗಲಿ ಅಥವಾ ವಿಶ್ವದ ಇತರ ವೇದಿಕೆಗಳಾಗಲಿ, ನಾವು ವಿಶ್ವದ ವೇದಿಕೆಗಳಲ್ಲಿ ಕೆಲಸ ಮಾಡುತ್ತಿದ್ದೇವೆ. ನಾವು ಯುಪಿಐನ ಶಕ್ತಿಯನ್ನು ಜಗತ್ತಿಗೆ ತೋರಿಸಿದ್ದೇವೆ. ಡಿಜಿಟಲ್ ವಹಿವಾಟಿನಲ್ಲಿ ಭಾರತ ಮಾತ್ರ ಶೇಕಡಾ 50 ರಷ್ಟು ಕೊಡುಗೆ ನೀಡುತ್ತಿದೆ ಎಂದು ಮೋದಿ ಹೇಳಿದರು.

ಸಮುದ್ರದ ಕೆಳಗೆ ತೈಲ ನಿಕ್ಷೇಪಗಳನ್ನು ಹುಡುಕುವ ನಿಟ್ಟಿನಲ್ಲಿ ನಾವು ಒಂದು ಮಿಷನ್ ಮೋಡ್‌ನಲ್ಲಿ ಕೆಲಸ ಮಾಡಲು ಬಯಸುತ್ತೇವೆ. ಭಾರತವು ಆಳವಾದ ನೀರಿನ ಪರಿಶೋಧನಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ. ಇಂಧನ ಕ್ಷೇತ್ರದಲ್ಲಿ ಸ್ವಾವಲಂಬಿಯಾಗಲು ಇದು ನಮ್ಮ ಪ್ರಮುಖ ಘೋಷಣೆಯಾಗಿದೆ. ಇಂದು ಜಗತ್ತು ನಿರ್ಣಾಯಕ ಖನಿಜಗಳ ಬಗ್ಗೆ ಜಾಗರೂಕವಾಗಿದೆ. ನಿರ್ಣಾಯಕ ಖನಿಜಗಳಲ್ಲಿ ಸ್ವಾವಲಂಬನೆಯೂ ನಮಗೆ ಅತ್ಯಗತ್ಯ ಎಂದರು.

Tags:    

Similar News