ಬಿಜೆಡಿ ಮುಖ್ಯಸ್ಥ ನವೀನ್ ಪಟ್ನಾಯಕ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದರು. ಒಡಿಶಾದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಡಿ ಸೋಲು ಅನುಭವಿಸಿದ್ದು, ಅವರ 24 ವರ್ಷಗಳ ಸುದೀರ್ಘ ಆಡಳಿತ ಕೊನೆಗೊಂಡಿದೆ..
ಪಟ್ನಾಯಕ್ ಅವರು ರಾಜಭವನದಲ್ಲಿ ರಾಜ್ಯಪಾಲ ರಘುಬರ್ ದಾಸ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಪತ್ರಕರ್ತರತ್ತ ಕೈಬೀಸಿದ ಅವರು ರಾಜೀನಾಮೆ ಪತ್ರವನ್ನು ಸಲ್ಲಿಸಿದ ನಂತರ ನಿರ್ಗಮಿಸಿದರು.
ಬಿಜೆಪಿ ಗೆಲುವು: ಬಿಜೆಪಿ ಒಡಿಶಾದ 147 ವಿಧಾನಸಭೆ ಕ್ಷೇತ್ರಗಳಲ್ಲಿ 78 ಸ್ಥಾನಗಳಲ್ಲಿ ಜಯ ಗಳಿಸಿದೆ. ಬಿಜೆಡಿ 51, ಕಾಂಗ್ರೆಸ್ 14, ಸಿಪಿಐ (ಎಂ) ಒಂದು ಹಾಗೂ ಮೂವರು ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಮಾರ್ಚ್ 5, 2000 ರಂದು ಮೊದಲ ಬಾರಿಗೆ ಒಡಿಶಾದ ಮುಖ್ಯಮಂತ್ರಿಯಾಗಿ ಪಟ್ನಾಯಕ್ ಪ್ರಮಾಣ ವಚನ ಸ್ವೀಕರಿಸಿದರು.