ಜಮ್ಮು ಕಾಶ್ಮೀರ ಮುಖ್ಯಮಂತ್ರಿಯಾಗಿ ಒಮರ್‌ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ

ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ನಂತರ ಆಯ್ಕೆಯಾದ ಮೊದಲ ಚುನಾಯಿತ ಸರ್ಕಾರ ಇದಾಗಿದೆ. ಈಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ 90 ಸ್ಥಾನಗಳ ಪೈಕಿ 48 ಸ್ಥಾನ ಗಳಿಸಿತ್ತು.;

Update: 2024-10-16 12:07 GMT

ಜಮ್ಮುಕಾಶ್ಮೀರದ ಮುಖ್ಯಮಂತ್ರಿಯಾಗಿ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ, ಉಪ ಮುಖ್ಯಮಂತ್ರಿಯಾಗಿ ಸುರಿಂದರ್‌ ಚೌಧರಿ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದರು.

ಶ್ರೀನಗರದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ನೂತನ ಮುಖ್ಯಮಂತ್ರಿ ಜೊತೆಗೆ ನಾಲ್ವರು ಶಾಸಕರು ಸಚಿವರಾಗಿ ಪ್ರಮಾಣ ಸ್ವೀಕರಿಸಿದರು. ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಪ್ರಮಾಣವಚನ ಬೋಧಿಸಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್, ಎನ್‌ಸಿಪಿ ಶರದ್‌ ಪವಾರ್‌ ಬಣದ ನಾಯಕರು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆದರೆ, ಕಾಂಗ್ರೆಸ್‌ ಸರ್ಕಾರದ ಯಾರೊಬ್ಬರು ಕೂಡ ನೂತನ ಸರ್ಕಾರದಲ್ಲಿ ಸೇರಿಲ್ಲ. ಒಮರ್ ಅಬ್ದುಲ್ಲಾ ನೇತೃತ್ವದ ಸಚಿವ ಸಂಪುಟದಲ್ಲಿ ಒಟ್ಟು 10 ಮಂದಿ ಇರಲಿದ್ದಾರೆ.

ಜಮ್ಮು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ನಂತರ ಆಯ್ಕೆಯಾದ ಮೊದಲ ಚುನಾಯಿತ ಸರ್ಕಾರ ಇದಾಗಿದೆ. ಈಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ 90 ಸ್ಥಾನಗಳ ಪೈಕಿ 48 ಸ್ಥಾನ ಗಳಿಸಿತ್ತು. ಇದರಲ್ಲಿ ಎನ್ಸಿ 42 ಸ್ಥಾನ ಗಳಿಸಿದರೆ, ಕಾಂಗ್ರೆಸ್ 6 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ನಾಲ್ವರು ಪಕ್ಷೇತರರು ಜಮ್ಮುಕಾಶ್ಮೀರ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದರು. ಅ.10 ರಂದು ಒಮರ್ ಅಬ್ದುಲ್ಲಾ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿತ್ತು.

ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ಒಮರ್‌ ಅಬ್ದುಲ್ಲಾ ಅವರು, ರಾಜ್ಯದಲ್ಲಿ ಸಾಕಷ್ಟು ಕೆಲಸಗಳು ಮಾಡಲು ಬಾಕಿ ಇವೆ. ಕಳೆದ 5-6ವರ್ಷಗಳಿಂದ ಇಲ್ಲಿನ ಜನರ ಕಷ್ಟಸುಖ ಕೇಳುವವರಿಲ್ಲ. ಈಗ ನಾನು ಅವರು ಅಶೋತ್ತರಗಳಿಗೆ ಸ್ಪಂದಿಸಬೇಕಾಗಿದೆ ಎಂದು ಹೇಳಿದರು.

Tags:    

Similar News