Operation Sindoor | ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತು
32 ವಿಮಾನ ನಿಲ್ದಾಣಗಳು ವಿಮಾನ ಕಾರ್ಯಾಚರಣೆಗೆ ಮತ್ತೆ ತೆರೆದಿವೆ
ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚಾದ ಹಿನ್ನೆಲೆಯಲ್ಲಿ ವಾಯುಪ್ರದೇಶ ನಿರ್ಬಂಧಗಳಿಂದಾಗಿ ಮುಚ್ಚಲ್ಪಟ್ಟ 32 ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.
ಪಾಕ್ ಶೆಲ್ ದಾಳಿಯಲ್ಲಿ ಮೃತಪಟ್ಟ ನಿವಾಸಿಯ ಕುಟುಂಬವನ್ನು ಭೇಟಿ ಮಾಡಿದ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ
ಪೂಂಚ್: ಕಳೆದ ಕೆಲವು ದಿನಗಳಲ್ಲಿ ನಡೆದ ಪಾಕಿಸ್ತಾನ ಶೆಲ್ ದಾಳಿಯಲ್ಲಿ ಮೃತಪಟ್ಟ ಅಮ್ರಿಕ್ ಸಿಂಗ್ ಅವರ ಕುಟುಂಬವನ್ನು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಭೇಟಿ ಮಾಡಿ ಸಂತಾಪ ಸೂಚಿಸಿದರು.
ಪಾಕ್ ಶೆಲ್ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ಒಮರ್ ಅಬ್ದುಲ್ಲಾ ಸಾಂತ್ವನ
ಜಮ್ಮುಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಡೆದಿದ್ದ ಪಾಕಿಸ್ತಾನ ಶೆಲ್ ದಾಳಿಯಲ್ಲಿ ಮೃತಪಟ್ಟ ಅಮ್ರಿಕ್ ಸಿಂಗ್ ಅವರ ಕುಟುಂಬ ಸದಸ್ಯರನ್ನು ಜಮ್ಮುಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಭೇಟಿಯಾಗಿ ಸಾಂತ್ವನ ಹೇಳಿದರು.
#WATCH | Poonch: J&K CM Omar Abdullah meets the family of Amrik Singh, who died in Pakistan shelling that took place in the last few days pic.twitter.com/BWrk9fGOVB
— ANI (@ANI) May 12, 2025
ಸೇನಾಪಡೆಗಳ ಮುಖ್ಯಸ್ಥರ ಜೊತೆ ಪ್ರಧಾನಿ ಉನ್ನತ ಮಟ್ಟದ ಸಭೆ
ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ತಮ್ಮ ನಿವಾಸದಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್ , ಸಶಸ್ತ್ರ ಪಡೆಗಳ ಮುಖ್ಯಸ್ಥ(ಸಿಡಿಎಸ್) ಜನರಲ್ ಅನಿಲ್ ಚೌಹಾಣ್ ಹಾಗೂ ಸೇನಾ ಪಡೆಗಳ ಮುಖ್ಯಸ್ಥರ ಜೊತೆ ಉನ್ನತ ಮಟ್ಟದ ಸಭೆ ನಡೆಸುತ್ತಿದ್ದಾರೆ.
ಭಾರತ ಹಾಗೂ ಪಾಕ್ ಡಿಜಿಎಂಒಗಳ ಮಾತುಕತೆ ಹಿನ್ನೆಲೆಯಲ್ಲಿ ಈ ಸಭೆ ಹೆಚ್ಚು ಮಹತ್ವ ಪಡೆದುಕೊಂಡಿದೆ.
ಪ್ರಧಾನಿ ನಿವಾಸಕ್ಕೆ ರಾಜನಾಥ್ ಸಿಂಗ್ ಆಗಮನ
ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ಮಟ್ಟದ (ಡಿಜಿಎಂಒ) ಸಭೆ ಹಿನ್ನೆಲೆಯಲ್ಲಿ ನವದೆಹಲಿಯ ಪ್ರಧಾನಿ ನಿವಾಸಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಗಮಿಸಿ, ಮಾತುಕತೆ ನಡೆಸಿದ್ದಾರೆ.
ಭದ್ರತೆ, ಸುರಕ್ಷತೆಗಾಗಿ ಇಸ್ರೋದಿಂದ 10 ಉಪಗ್ರಹಗಳ ನಿಯೋಜನೆ
ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ಜಮ್ಮುಕಾಶ್ಮೀರ, ಪಂಜಾಬ್ ಹಾಗೂ ರಾಜಸ್ಥಾನದ ಗಡಿ ಸೇರಿದಂತೆ ದೇಶದಲ್ಲಿ ನಾಗರಿಕರ ಭದ್ರತೆ ಹಾಗೂ ಸುರಕ್ಷತೆ ಖಾತರಿಪಡಿಸಿಕೊಳ್ಳಲು 10ಉಪಗ್ರಹಗಳನ್ನು ನಿಯೋಜಿಸಲಾಗಿದೆ ಎಂದು ಇಸ್ರೋ ಅಧ್ಯಕ್ಷ ವಿ.ನಾರಾಯಣನ್ ತಿಳಿಸಿದ್ದಾರೆ.
ಉಪಗ್ರಹಗಳು ಗಡಿಯಲ್ಲಿ ಉಗ್ರರ ಒಳನುಸುಳುವಿಕೆ ಮೇಲೂ ನಿಗಾ ಇರಿಸಿವೆ. ಈ ಉಪಗ್ರಹಗಳು ದಿನದ 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸಲಿವೆ ಎಂದು ಹೇಳಿದ್ದಾರೆ.
ಜಮ್ಮು ಗಡಿಯಿಂದ ಸುರಕ್ಷಿತವಾಗಿ ಮರಳಿದ ದಕ್ಷಿಣ ರಾಜ್ಯಗಳ ವಿದ್ಯಾರ್ಥಿಗಳು
ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದ ಒಟ್ಟು 489 ವಿದ್ಯಾರ್ಥಿಗಳನ್ನು ಜಮ್ಮುಕಾಶ್ಮೀರ ಮತ್ತು ಪಾಕಿಸ್ತಾನದ ಗಡಿಯಲ್ಲಿರುವ ಇತರ ರಾಜ್ಯಗಳಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.
ಆಂಧ್ರಪ್ರದೇಶದ 350, ತೆಲಂಗಾಣದ 126 ಮಂದಿ, ಕರ್ನಾಟಕದ 13 ಮಂದಿ ಸುರಕ್ಷಿತವಾಗಿ ಮರಳಿದ್ದಾರೆ. ಗಡಿಯಲ್ಲಿರುವ ಆಂಧ್ರಪ್ರದೇಶದ ವಿದ್ಯಾರ್ಥಿಗಳಿಗಾಗಿ ದೆಹಲಿಯ ಆಂಧ್ರಪ್ರದೇಶ ಭವನವು 24x7 ನಿಯಂತ್ರಣ ಕೊಠಡಿ ಸ್ಥಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಾಂತರಗೊಂಡ ವಿದ್ಯಾರ್ಥಿಗಳು ಶ್ರೀನಗರದ ಎನ್‌ಐಟಿ, ಶೇರ್-ಎ-ಕಾಶ್ಮೀರ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇನ್ನು ಕೆಲವರು ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಇದ್ದಾರೆ ಎಂದು ತಿಳಿದು ಬಂದಿದೆ.
ಸಜಹ ಸ್ಥಿತಿಗೆ ಮರಳಿದ ಜಮ್ಮುಕಾಶ್ಮೀರ; ಕೇಳದ ಗುಂಡಿನ ಸದ್ದು
ಜಮ್ಮುಕಾಶ್ಮೀರದಲ್ಲಿ ಏ.22 ರ ಬಳಿಕ ಇದೇ ಮೊದಲ ಬಾರಿಗೆ ಯಾವುದೇ ಗುಂಡಿನ ಸದ್ದು ಕೇಳದೇ ಶಾಂತಿ ನೆಲೆಸಿದೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಬಳಿಕ ಜಮ್ಮುಕಾಶ್ಮೀರ ಗಡಿಯಲ್ಲಿ ನಿತ್ಯ ಗುಂಡಿನ ಮೊರೆತ ಜನರನ್ನು ಬೆಚ್ಚಿ ಬೀಳಿಸಿತ್ತು. ಜನರು ಬಂಕರ್‌ಗಳಲ್ಲಿ ಆಶ್ರಯ ಪಡೆದಿದ್ದರು. ಈಗ ಕದನ ವಿರಾಮ ಘೋಷಣೆಯಾದ ಬಳಿಕ ಯಾವುದೇ ಗುಂಡಿನ ಸದ್ದು ಕೇಳುತ್ತಿಲ್ಲ. ಜನಜೀವನ ಸಹಜ ಸ್ಥಿತಿಗೆ ಬಂದಿದೆ.