Operation Sindoor: ಪಾಕಿಸ್ತಾನದಿಂದ ಡ್ರೋನ್ ದಾಳಿಯ ಭೀತಿ; ಧರ್ಮಶಾಲಾ ಐಪಿಎಲ್ ಪಂದ್ಯ ರದ್ದು

ಪಾಕಿಸ್ತಾನದ ಈ ದಾಳಿಯ ಭೀತಿಯಿಂದಾಗಿ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಐಪಿಎಲ್ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಪಂಜಾಬ್ ಮತ್ತು ಡೆಲ್ಲಿ ನಡುವಿನ ಪಂದ್ಯವನ್ನು ಮಧ್ಯದಲ್ಲೇ ಸ್ಥಗಿತಗೊಳಿಸಲಾಗಿದೆ ಎಂದು ಸೇನೆಯ ಸೂಚನೆಯ ಮೇರೆಗೆ ಪ್ರಕಟಣೆ ತಿಳಿಸಿದೆ.;

Update: 2025-05-08 17:10 GMT

ಭಾರತವು ಆಪರೇಷನ್ ಸಿಂದೂರ್ ಕಾರ್ಯಾಚರಣೆಯ ಮೂಲಕ ಮೇ 7ರಂದು ಪಾಕಿಸ್ತಾನಕ್ಕೆ ತಕ್ಕ ತಿರುಗೇಟು ನೀಡಿದ ಬೆನ್ನಲ್ಲೇ, ಮೇ 8 ರಂದು ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿಸಿಕೊಂಡು ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸುವ ಭೀತಿ ಎದುರಾಗಿದೆ. ಆದಾಗ್ಯೂ, ಭಾರತೀಯ ಸೇನೆಯು ಜಮ್ಮು ಕಾಶ್ಮೀರ ಮತ್ತು ಪಂಜಾಬ್‌ನಂತಹ ಕಡೆಗಳಲ್ಲಿ ನಡೆದ ದಾಳಿಗಳನ್ನು ಯಶಸ್ವಿಯಾಗಿ ವಿಫಲಗೊಳಿಸಿದೆ, ಆಗಸದಲ್ಲೇ ಡ್ರೋನ್ ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಿದೆ.

ಪಾಕಿಸ್ತಾನದ ಈ ದಾಳಿಯ ಭೀತಿಯಿಂದಾಗಿ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಐಪಿಎಲ್ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಪಂಜಾಬ್ ಮತ್ತು ಡೆಲ್ಲಿ ನಡುವಿನ ಪಂದ್ಯವನ್ನು ಮಧ್ಯದಲ್ಲೇ ಸ್ಥಗಿತಗೊಳಿಸಲಾಗಿದೆ ಎಂದು ಸೇನೆಯ ಸೂಚನೆಯ ಮೇರೆಗೆ ಪ್ರಕಟಣೆ ತಿಳಿಸಿದೆ.

ಜಮ್ಮು ವಿಮಾನ ನಿಲ್ದಾಣದ ಬಳಿಕ ಪಂಜಾಬ್‌ನ ಹಲವೆಡೆ ಗುರುವಾರ ಸಂಜೆ ಭಾರಿ ಸ್ಫೋಟದ ಸದ್ದು ಕೇಳಿಬಂದಿದೆ. ಜಮ್ಮು ಮತ್ತು ಕಾಶ್ಮೀರದ ಸಾಂಬಾ ಮತ್ತು ಪಠಾಣ್‌ಕೋಟ್ ಮುಂತಾದ ಕಡೆಗಳಲ್ಲಿ ಪಾಕಿಸ್ತಾನ ಶೆಲ್ ದಾಳಿ ನಡೆಸಿದೆ.

ಪಾಕಿಸ್ತಾನವು ಜಮ್ಮು ವಾಯುನೆಲೆ, ಜೈಸಲ್ಮೇರ್, ಪಠಾಣ್‌ಕೋಟ್, ಅಖ್ನೂರ್, ರಾಜೌರಿ, ಪೂಂಚ್ ಮತ್ತು ತಂಗಹಾರ್ ಸೇರಿದಂತೆ ಗಡಿ ಸಮೀಪದ ಹಲವಾರು ಪ್ರದೇಶಗಳ ಮೇಲೆ ಡ್ರೋನ್ ದಾಳಿ ನಡೆಸಲು ಪ್ರಯತ್ನಿಸಿದ್ದು, ಭಾರತೀಯ ಸೇನೆಯು ಇದನ್ನು ವಿಫಲಗೊಳಿಸಿದೆ. ಮೂಲಗಳ ಪ್ರಕಾರ, ಪಾಕಿಸ್ತಾನವು ಹಮಾಸ್ ಉಗ್ರರ ಮಾದರಿಯಲ್ಲಿ ದಾಳಿ ನಡೆಸಲು ಯತ್ನಿಸಿದೆ. ಭಾರತದ ಅತ್ಯಾಧುನಿಕ ಎಸ್-400 (S-400) ಏರ್ ಡಿಫೆನ್ಸ್ ಸಿಸ್ಟಮ್ ಪಾಕಿಸ್ತಾನದ ಯುದ್ಧ ವಿಮಾನ, ಡ್ರೋನ್ ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಿದೆ.

Tags:    

Similar News