ಪಾಕಿಸ್ತಾನವು ಭಯೋತ್ಪಾದನೆ ಬೆಂಬಲಿದ್ದರಿಂದ ಭಾರತದ ಕೆಂಗಣ್ಣಿಗೆ ಗುರಿಯಾಯಿತು ಎಂದು ವಾಯುಪಡೆ ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ಮಾರ್ಷಲ್ ಎ.ಕೆ.ಭಾರ್ತಿ ಹೇಳಿದರು. ನವದೆಹಲಿಯಲ್ಲಿ ಸೋಮವಾರ ಮೂರು ಪಡೆಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾ ನಿರ್ದೇಶಕರು ಕರೆದಿದ್ದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ವಾಯುಪಡೆ ಕಾರ್ಯಾಚರಣೆಯ ಮಾಹಿತಿ ನೀಡಿದರು. ಭಾರತದ ಮೇಲಿನ ದಾಳಿಗೆ ಪಾಕಿಸ್ತಾನ ಸೇನೆ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಡ್ರೋನ್ ಹಾಗೂ ಮಾನವರಹಿತ ವಿಮಾನಗಳನ್ನು ಬಳಸಿತು. ಆದರೆ ಭಾರತದ ವಾಯು ರಕ್ಷಣಾ ವ್ಯವಸ್ಥೆ ಆ ಎಲ್ಲಾ ಪ್ರಯತ್ನಗಳನ್ನು ವಿಫಲಗೊಳಿಸಿತು. ಚೀನಾ ನಿರ್ಮಿತ ಪಿಎಲ್-15 ಕ್ಷಿಪಣಿಯನ್ನೂ ಭಾರತದ ಮೇಲೆ ಪ್ರಯೋಗಿಸಿದೆ. ಪಾಕಿಸ್ತಾನ ಸೇನೆ ಹಾರಿಸಿದ ರಾಕೆಟ್ ಮತ್ತು ಮಾನವ ಸಹಿತ ವಿಮಾನಗಳನ್ನು ವಾಯುಪಡೆಯ ಯೋಧರು ಹಾಗೂ ವಾಯು ರಕ್ಷಣಾ ವ್ಯವಸ್ಥೆ ವಿಫಲಗೊಳಿಸಿದೆ ಎಂದು ವಿವರಿಸಿದರು.#OperationSindoor | Delhi: When asked if India hit Kirana Hills, Air Marshal AK Bharti says, "Thank you for telling us that Kirana Hills houses some nuclear installation, we did not know about it. We have not hit Kirana Hills, whatever is there." pic.twitter.com/wcBBVIhif1— ANI (@ANI) May 12, 2025 ಸೇನಾನೆಲೆಗಳು ಸುರಕ್ಷಿತಭಾರತೀಯ ಸೇನೆಯ ಯೋಜನಾಬದ್ಧ ರಕ್ಷಣೆಯಿಂದಾಗಿ ಎಲ್ಲಾ ಸೇನಾ ನೆಲೆಗಳು ಸುರಕ್ಷಿತವಾಗಿವೆ. ಆಕಾಶ್ ಕ್ಷಿಪಣಿ ಒಳಗೊಂಡ ವಾಯು ರಕ್ಷಣಾ ವ್ಯವಸ್ಥೆಯು ಶತ್ರುಗಳ ಕ್ಷಿಪಣಿಗಳನ್ನು ನಾಶಪಡಿಸಿದೆ. ಭಾರತದ ಸೇನೆ ನೆಲೆಗಳನ್ನು ಗುರಿಯಾಗಿಸಿ ನಡೆಸಿದ ಪ್ರತಿ ದಾಳಿಯನ್ನು ತಟಸ್ಥಗೊಳಿಸಿದ್ದೇವೆ. ನಮ್ಮ ದಾಳಿ ಉಗ್ರರ ಮೂಲಸೌಕರ್ಯ ಮತ್ತು ಉಗ್ರರ ವಿರುದ್ಧವಾಗಿತ್ತು. ಆದರೆ, ಪಾಕಿಸ್ತಾನ ಸೇನೆಯು ಭಯೋತ್ಪಾದಕರನ್ನು ಬೆಂಬಲಿಸುವ ಆಯ್ಕೆ ಮಾಡಿಕೊಂಡು ಸಂಘರ್ಷ ವಿಸ್ತರಿಸುವಂತೆ ಮಾಡಿತು ಎಂದು ಏರ್ ಮಾರ್ಷಲ್ ಎ.ಕೆ.ಭಾರ್ತಿ ತಿಳಿಸಿದರು. ಪಾಕಿಸ್ತಾನದ ಹೊಸ ತಂತ್ರಜ್ಞಾನ ಆಧರಿತ ಯುದ್ಧ ವಿಮಾನಗಳು, ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದೇವೆ. ಅಲ್ಲದೇ ರಾಜಧಾನಿ ಇಸ್ಲಾಮಾಬಾದ್ಗೆ ಸಮೀಪವಿರುವ ಪ್ರಮುಖ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದ್ದೇವೆ ಎಂದು ಹೇಳಿದರು. ಕಿರಾನಾ ಬೆಟ್ಟಗಳಲ್ಲಿ ಅಣುಸ್ಥಾವರಗಳಿವೆ ಎಂಬ ಮಾಹಿತಿ ನಮಗೆ ತಿಳಿದಿಲ್ಲ. ನಾವು ಅವುಗಳನ್ನು ಗುರಿಯಾಗಿಸಿ ದಾಳಿ ನಡೆಸಿಲ್ಲ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.#WATCH | Delhi: Vice Admiral AN Pramod says, "Effectively using multiple sensors and inputs, we are maintaining continuous surveillance to degrade or neutralise threats as they emerge or manifest to ensure targeting at extended ranges. All these are conducted under the umbrella… pic.twitter.com/emSuQ4TfFK— ANI (@ANI) May 12, 2025 ನೌಕಾಪಡೆ ಕಾರ್ಯಾಚರಣೆಗಳ ಮಹಾನಿರ್ದೇಶಕ ವೈಸ್ ಅಡ್ಮಿರಲ್ ಎ.ಎನ್. ಪ್ರಮೋದ್ ಮಾತನಾಡಿ, ಶತ್ರು ರಾಷ್ಟ್ರದ ನಿರಂತರ ಬೆದರಿಕೆ ಹಾಗೂ ದಾಳಿಗಳನ್ನು ನಾವು ತಡೆದಿದ್ದೇವೆ. ಸಮರನೌಕೆಯಲ್ಲಿನ ವಾಯು ರಕ್ಷಣಾ ವ್ಯವಸ್ಥೆಯ ಸಹಾಯದಿಂದ ಪಾಕಿಸ್ತಾನದ ಡ್ರೋನ್, ಸೂಪರ್ಸಾನಿಕ್ ಕ್ಷಿಪಣಿ ಹಾಗೂ ಯುದ್ಧವಿಮಾನಗಳನ್ನು ಹೊಡೆದು ಹಾಕಿದ್ದೇವೆ ಎಂದು ತಿಳಿಸಿದರು.ಮಿಲಿಟರಿ ಕಾರ್ಯಾಚರಣೆಗಳ ಮಹಾ ನಿರ್ದೇಶಕ ಲೆಫ್ಟಿನಂಟ್ ಜನರಲ್ ರಾಜೀವ್ ಘಾಯ್ ಮಾತನಾಡಿ, ನಮ್ಮ ವಾಯುನೆಲೆಯನ್ನು ಗುರಿಯಾಗಿಸುವುದು ಬಹಳ ಕಷ್ಟ. ಭಾರತದ ಹಲವು ಹಂತಗಳ ರಕ್ಷಣಾ ಕೋಟೆ ಭೇದಿಸಬೇಕಾದರೆ ಕನಿಷ್ಠ ಒಂದರಲ್ಲಾದರೂ ಪೆಟ್ಟು ತಿನ್ನುವುದು ಖಚಿತ ಎಂದು ಸೇನಾ ಸಾಮರ್ಥ್ಯದ ಕುರಿತು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದರು.#WATCH | Delhi | DGMO Lieutenant General Rajiv Ghai says, "In the last few years, the character of terrorist activities have changed. Innocent civilians were being attacked.. 'Pahalgam tak paap ka ye ghada bhar chuka tha'..." pic.twitter.com/Nr21vVKSTo— ANI (@ANI) May 12, 2025 ಸಂಜೆ ಡಿಜಿಎಂಒ ಸಭೆಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಘೋಷಣೆ ನಂತರ ನಡೆಯುತ್ತಿರುವ ಪಾಕಿಸ್ತಾನ ಹಾಗೂ ಭಾರತದ ಡಿಜಿಎಂಒಗಳ ಸಭೆ ಸೋಮವಾರ ಸಂಜೆ ನಿಗದಿಯಾಗಿದೆ. ಹಾಟ್ಲೈನ್ ಮೂಲಕ ಉಭಯ ರಾಷ್ಟ್ರಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.