Eknath Shinde: ಆಸ್ಪತ್ರೆಗೆ ದಾಖಲಾದ ಮಹಾರಾಷ್ಟ್ರದ ಮಾಜಿ ಸಿಎಂ ಏಕನಾಥ್​ ಶಿಂಧೆ

ರಾಜ್ಯದ ಮುಂದಿನ ಮುಖ್ಯಮಂತ್ರಿಯ ಆಯ್ಕೆ ಬಗ್ಗೆ ಕುತೂಹಲ ಮೂಡಿರುವ ನಡುವೆ ಶಿಂಧೆ ಹಿನ್ನೆಲೆಯಲ್ಲಿದ್ದರು. ಹೊಸ ಸರ್ಕಾರ ರೂಪುಗೊಳ್ಳುತ್ತಿರುವ ರೀತಿಯಿಂದ ಅವರು ಅಸಮಾಧಾನಗೊಂಡಿದ್ದಾರೆ ಎಂಬ ಊಹಾಪೋಹಗಳು ಸೃಷ್ಟಿಯಾಗಿದ್ದವು.;

Update: 2024-12-03 09:11 GMT
Eknath Shinde

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆಯ ಕಂಡುಬರದ ಕಾರಣ ಅವರನ್ನು ಥಾಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಎನ್ಐ ಮಂಗಳವಾರ (ನವೆಂಬರ್ 3) ವರದಿ ಮಾಡಿದೆ.


ಕೆಲವು ದಿನಗಳ ಹಿಂದೆ ಅಸೌಖ್ಯದ ಹಿನ್ನೆಲೆಯಲ್ಲಿ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಬಳಿಕ ಅವರು ಸುಧಾರಿಕೊಂಡು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದರು. ಇದೀಗ ಮತ್ತೆ ಅನಾರೋಗ್ಯ ಎದುರಾಗಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ದೇಹದ ಸಂಪೂರ್ಣ ಪರೀಕ್ಷೆಗೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.

ರಾಜ್ಯದ ಮುಂದಿನ ಮುಖ್ಯಮಂತ್ರಿಯ ಆಯ್ಕೆ ಬಗ್ಗೆ ಕುತೂಹಲ ಮೂಡಿರುವ ನಡುವೆ ಶಿಂಧೆ ಹಿನ್ನೆಲೆಯಲ್ಲಿದ್ದರು. ಹೊಸ ಸರ್ಕಾರ ರೂಪುಗೊಳ್ಳುತ್ತಿರುವ ರೀತಿಯಿಂದ ಅವರು ಅಸಮಾಧಾನಗೊಂಡಿದ್ದಾರೆ ಎಂಬ ಊಹಾಪೋಹಗಳು ಸೃಷ್ಟಿಯಾಗಿದ್ದವು. ಏತನ್ಮಧ್ಯೆ ಅವರು ಶುಕ್ರವಾರ ಸತಾರಾ ಜಿಲ್ಲೆಯ ತಮ್ಮ ಸ್ವಂತ ಗ್ರಾಮಕ್ಕೆ ತೆರಳಿದ್ದರು. ಅಲ್ಲಿ ಅವರಿಗೆ ಜ್ವರ ಅಧಿಕವಾಗಿದೆ ಎಂದು ಹೇಳಲಾಗಿದೆ.

ಸತಾರಾ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂತಿರುಗುವ ಮೂಲಕ ಮುಖ್ಯಮಂತ್ರಿಯಾಗಿ ಎರಡನೇ ಅವಕಾಶ ನೀಡದಿರುವುದಕ್ಕೆ ಶಿಂಧೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ ಎಂದು ವರದಿಗಳು ಹೇಳಿದ್ದರು. ಆದರೆ ಬಿಡುವಿಲ್ಲದ ಚುನಾವಣಾ ಪ್ರಚಾರದ ನಂತರ ವಿಶ್ರಾಂತಿಯ ಕಾರಣಕ್ಕೆ ಅವರು ಮನೆಗೆ ಹೋಗಿದ್ದಾರೆ ಎಂದು ಶಿವಸೇನೆ ಮೂಲಗಳು ತಿಳಿಸಿದ್ದವು.

    

ಡಿಸೆಂಬರ್ 5 ರಂದು ಮಹಾರಾಷ್ಟ್ರದಲ್ಲಿ ಹೊಸ ಮಹಾಯುತಿ ಸರ್ಕಾರ ರಚನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಹಿರಿಯ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಪರಿಗಣಿಸಲಾಗುತ್ತಿದೆ. ಡಿಸೆಂಬರ್ 4ರಂದು ನಡೆಯಲಿರುವ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಹಾಯುತಿ ಮೈತ್ರಿಕೂಟವು ಇನ್ನೂ ಯಾವುದೇ ಹೆಸರನ್ನು ಘೋಷಿಸಿಲ್ಲ.

ಇತ್ತೀಚೆಗೆ ಮುಕ್ತಾಯಗೊಂಡ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ, ಮಹಾಯುತಿ 288 ವಿಧಾನಸಭಾ ಸ್ಥಾನಗಳಲ್ಲಿ 230 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 132 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಶಿವಸೇನೆ (ಶಿಂಧೆ) 57 ಮತ್ತು ಅಜಿತ್ ಪವಾರ್ ನೇತೃತ್ವದ ಎನ್ಸಿಪಿ 41 ಸ್ಥಾನಗಳನ್ನು ಗಳಿಸಿದೆ.

Tags:    

Similar News