Pahalgam Terror Attack | ಕಾಶ್ಮೀರದಲ್ಲಿ ಎನ್ಐಎ ತಂಡ; ಪರಿಹಾರ ಘೋಷಿಸಿದ ಜಮ್ಮು-ಕಾಶ್ಮೀರ ಸರ್ಕಾರ

Update: 2025-04-22 14:57 GMT
Live Updates - Page 4
2025-04-22 16:06 GMT

ನಿಮ್ಮನ್ನು ಕೊಲ್ಲಲ್ಲ, ಹೋಗಿ ಮೋದಿಗೆ ಹೇಳಿ ಎಂದ ಉಗ್ರಗಾಮಿಗಳು

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿನಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಕನಿಷ್ಠ ಐವರು ಪ್ರವಾಸಿಗರು ಗಾಯಗೊಂಡಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ, ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟಿದ್ದು, ಇವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಮಧ್ಯಾಹ್ನ 2:30ರ ಸುಮಾರಿಗೆ ಕುದುರೆ ಸವಾರಿ ಮಾಡುತ್ತಿದ್ದ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆದಿದೆ. ಲಷ್ಕರ್-ಎ-ತೊಯ್ಬಾದ ಪರೋಕ್ಷ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಈ ದಾಳಿಯ ಜವಾಬ್ದಾರಿ ಹೊತ್ತಿದೆ.

ಘಟನೆ ಬಗ್ಗೆ ಮಂಜುನಾಥ್ ಪತ್ನಿ ಪಲ್ಲವಿ ಪ್ರತಿಕ್ರಿಯೆ ನೀಡಿದ್ದು, ಏ.19ರಂದು ಪ್ರವಾಸಕ್ಕೆ ಹೋಗಿದ್ದೆವು. ಉಗ್ರರು ಬಂದು ನಮ್ಮ ಧರ್ಮವನ್ನು ವಿಚಾರಿಸಿ, ನಮ್ಮ ಕಣ್ಣೆದುರಿಗೇ ಪತಿಯನ್ನು ಉಗ್ರಗಾಮಿಗಳು ಹತ್ಯೆ ಮಾಡಿದ್ದಾರೆ. ಅವರನ್ನು ಕೊಲ್ಲು ವೇಳೆ ನನ್ನನ್ನು ಹಾಗೂ ಮಗನನ್ನು ಕೊಂದುಬಿಡಿ ಎಂದು ನಾವು ಉಗ್ರರಿಗೆ ಕೋರಿಕೊಂಡೆವು. ಆಗ ಅವರು ನಿಮ್ಮನ್ನು ಕೊಲ್ಲಲ್ಲ, ಹೋಗಿ ಮೋದಿಗೆ ಹೇಳಿ ಎಂದು ತಿಳಿಸಿದ್ದಾರೆ.

2025-04-22 16:02 GMT

ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

2025-04-22 16:01 GMT

ಇಬ್ಬರು ಕನ್ನಡಿಗರ ಹತ್ಯೆಗೈದ ಭಯೋತ್ಪಾದಕರು

ಜಮ್ಮು ಮತ್ತು ಕಾಶ್ಮೀರದ ಪಾಹಲ್ಗಾಮ್‌ನ ಬೈಸರಾನ್ ವ್ಯಾಲಿಯಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಒಟ್ಟು ಇಬ್ಬರು ಕನ್ನಡಿಗರು ಮೃತಪಟ್ಟಿದ್ದಾರೆ. ಹಾವೇರಿಯ ರಾಣೇಬೆನ್ನೂರಿನ ಭರತ್ ಭೂಷಣ್ ಮತ್ತು ಶಿವಮೊಗ್ಗದ ವಿಜಯನಗರದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ ಮೃತಪಟ್ಟವರು. ಅವರು ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಅವರ ಸಂಬಂಧಿ

ಘಟನೆಯಲ್ಲಿ ಒಟ್ಟು 26 ಮಂದಿ ಮೃತಪಟ್ಟಿದ್ದು ಪುಲ್ವಾಮ ದಾಳಿ ಬಳಿಕ ಅತ್ಯಂತ ದೊಡ್ಡ ದಾಳಿಯಾಗಿದೆ ಲಷ್ಕರ್-ಎ-ತೊಯ್ಬಾದ ಬೆಂಬಲಿತ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ದಾಳಿಯ ಹೊಣೆ ಹೊತ್ತುಕೊಂಡಿದೆ. ಭರತ್ ಭೂಷಣ್ ಅವರ ವೈಯಕ್ತಿಕ ವಿವರಗಳ ಬಗ್ಗೆ ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

Tags:    

Similar News