Pahalgam Terror Attack | ಉಗ್ರರ ವಿರುದ್ಧ ಮೋದಿ ಕಟು ಮಾತು; ಆದರೆ ಸರ್ವ ಪಕ್ಷ ಸಭೆ ನಡೆಸಲಿದ್ದಾರೆ ರಾಜನಾಥ್ ಸಿಂಗ್
By : The Federal
Update: 2025-04-24 06:05 GMT
2025-04-24 06:27 GMT
ಉಗ್ರರ ಸುಳಿವು ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನ
ಜಮ್ಮುಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿದ್ದ ಉಗ್ರರ ಚಿತ್ರಗಳನ್ನು ಬಿಡುಗಡೆ ಮಾಡಲಾಗಿದ್ದು ಉಗ್ರರ ಸುಳಿವು ನೀಡಿದವರಿಗೆ ಜಮ್ಮು ಕಾಶ್ಮೀರ ಪೊಲೀಸರು 20 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.
ಬೇಸಿಗೆ ರಜೆ ಕಳೆಯಲು ಪ್ರವಾಸಿಗರು ಮಿನಿ ಸ್ವಿಜ್ಜರ್‌ಲ್ಯಾಂಡ್ ಎಂದೇ ಖ್ಯಾತಿಯಾಗಿರುವ ಜಮ್ಮುಕಾಶ್ಮೀರದ ಪಹಲ್ಗಾಮ್‌ಗೆ ತೆರಳಿದ್ದರು, ಈ ವೇಳೆ ಭಯೋತ್ಪದಕರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದರು, ಕರ್ನಾಟಕದ ಮೂವರು ಸೇರಿದಂತೆ ಮುವತ್ತಕ್ಕೂ ಅಧಿಕ ಮಂದಿ ಸಾವನ್ನಪಿದ್ದು ಹಲವು ಜನರು ಗಾಯಗಂಡಿದ್ದರು.
ಲಷ್ಕರ್-ಎ-ತೊಯ್ಬ ಸಂಘಟನೆಯೊಂದಿಗೆ ಸಂಬಂಧ ಹೊಂದಿರುವ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಈ ದಾಳಿಯ ಹೊಣೆಗಾರಿಕೆ ಹೊತ್ತಿದೆ, ಉಗ್ರರ ಹೆಡೆಮುರಿಕಟ್ಟಲು ಜಮ್ಮು ಕಾಶ್ಮೀರದ ಪೊಲೀಸರು ಹಾಗೂ ಭಾರತೀಯ ಸೇನಾಪಡೆ ಜಂಟಿ ಕಾರ್ಯಾಚರಣೆ ಕೈಗೊಂಡಿದ್ದು ಉಗ್ರರ ಸುಳಿವು ನೀಡಿದವರಿಗೆ ಬಹುಮಾನ ಕೂಡ ಘೋಷಿಸಿದೆ.