ಪಾಕಿಸ್ತಾನ ವೈಮಾನಿಕ ದಾಳಿ ; ಆಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಸೇರಿ ಎಂಟು ಮಂದಿ ಸಾವು

ಆಫ್ಘಾನಿಸ್ತಾನದ ಆಟಗಾರರು ಪಾಕಿಸ್ತಾನ ಗಡಿಯ ಪೂರ್ವ ಪಕ್ತಿಕಾ ಪ್ರಾಂತ್ಯದಲ್ಲಿ ಸೌಹಾರ್ದ ಕ್ರಿಕೆಟ್ ಪಂದ್ಯದಲ್ಲಿ ಭಾಗವಹಿಸಲು ಆಗಮಿಸಿದ್ದಾಗ ಪಾಕಿಸ್ತಾನ ವೈಮಾನಿಕ ದಾಳಿ ನಡೆಸಿದ್ದು, ಮೂವರು ಆಟಗಾರರು ಮೃತಪಟ್ಟಿದ್ದಾರೆ ಎಂದು ಆಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ತನ್ನ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಖಚಿತಪಡಿಸಿದೆ.

Update: 2025-10-18 03:42 GMT

ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟ್ ಅಟಗಾರರು ಮೃತಪಟ್ಟಿದ್ದಾರೆ.

ಆಫ್ಘಾನಿಸ್ತಾನದ ಆಟಗಾರರು ಪಾಕಿಸ್ತಾನ ಗಡಿಯ ಪೂರ್ವ ಪಕ್ತಿಕಾ ಪ್ರಾಂತ್ಯದಲ್ಲಿ ಸೌಹಾರ್ದ ಕ್ರಿಕೆಟ್ ಪಂದ್ಯದಲ್ಲಿ ಭಾಗವಹಿಸಲು ಆಗಮಿಸಿದ್ದಾಗ ಪಾಕಿಸ್ತಾನ ವೈಮಾನಿಕ ದಾಳಿ ನಡೆಸಿದ್ದು, ಮೂವರು ಆಟಗಾರರು ಮೃತಪಟ್ಟಿದ್ದಾರೆ ಎಂದು ಆಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ತನ್ನ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಖಚಿತಪಡಿಸಿದೆ. 

ಪಕ್ತಿಕಾ ಪ್ರಾಂತ್ಯದಲ್ಲಿ ಉರ್ಗುನ್‌ನಿಂದ ಶರಾನಾಗೆ ಪ್ರಯಾಣಿಸುತ್ತಿದ್ದಾಗ ಈ ದಾಳಿ ನಡೆದಿದ್ದು, ಕ್ರಿಕೆಟ್ ಆಟಗಾರರ ಜತೆಗೆ ಐವರು ನಾಗರಿಕರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.

ಮೃತ ಕ್ರಿಕೆಟಿಗರನ್ನು ಕಬೀರ್, ಸಿಬ್ಘಾತುಲ್ಲಾ ಮತ್ತು ಹರೂನ್ ಎಂದು ಗುರುತಿಸಲಾಗಿದೆ. ಈ ದಾಳಿಯ ವಿರುದ್ಧ ಆಫ್ಘಾನಿಸ್ತಾನ ಕ್ರಿಕೆಟಿಗರು ಧ್ವನಿಯೆತ್ತಿದ್ದು, ತಮ್ಮ ಸಾಮಾಜಿಕ‌ ಜಾಲತಾಣದ ಖಾತೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಕ್ರಿಕೆಟಿಗ ರಶೀದ್ ಖಾನ್ ಕೂಡ ಪಾಕ್ ದಾಳಿಯನ್ನು ಖಂಡಿಸಿದ್ದಾರೆ. ನಾಗರಿಕರ ಮೇಲೆ ದಾಳಿ ಮಾಡಿರುವುದು ಸರಿಯಲ್ಲ ಎಂದು ಖಂಡನೆ ವ್ಯಕ್ತಪಡಿಸಿದ್ದಾರೆ.

ಆಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಭಾರತ ಭೇಟಿ ಬೆನ್ನಲ್ಲೇ ಪಾಕಿಸ್ತಾನವು ಕಾಬೂಲ್ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಗೆ ಪ್ರತೀಕಾರವಾಗಿ ಅಫ್ಘಾನಿಸ್ತಾನ ಡುರಾಂಡ್‌ ರೇಖೆಯ ಗಡಿಯಲ್ಲಿ 12 ಪಾಕಿಸ್ತಾನ ಸೈನಿಕರನ್ನು ಹತ್ಯೆ ಮಾಡಿತ್ತು. 

ಈ ಮಧ್ಯೆ ಪಾಕಿಸ್ತಾನದಿಂದ 14 ಲಕ್ಷಕ್ಕೂ ಹೆಚ್ಚಿನ ಆಫ್ಘಾನ್ ನಿರಾಶ್ರಿತರನ್ನು ಪಾಕಿಸ್ತಾನ ತನ್ನ ನೆಲದಿಂದ ವಾಪಸ್ ಕಳುಹಿಸಿದೆ. ದೇಶದಲ್ಲೇ ಉಳಿದಿರುವವರಿಗೆ ಸಮಯಾವಕಾಶ ನೀಡಲಾಗಿದೆ.

Tags:    

Similar News