ಅರುಣಾಚಲ ಪ್ರದೇಶ: ಪೆಮಾ ಖಂಡು ಪ್ರಮಾಣವಚನ

ಖಂಡು ಅವರೊಂದಿಗೆ 11 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Update: 2024-06-13 07:56 GMT

ಬಿಜೆಪಿ ನಾಯಕ ಪೆಮಾ ಖಂಡು ಅವರು ಸತತ ಮೂರನೇ ಅವಧಿಗೆ ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಗುರುವಾರ (ಜೂನ್ 13) ಪ್ರಮಾಣವಚನ ಸ್ವೀಕರಿಸಿದರು. 

ಮುಕ್ತೋ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಖಂಡು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಇತರ ಹಲವು ನಾಯಕರ ಸಮ್ಮುಖದಲ್ಲಿ ರಾಜ್ಯಪಾಲ ಕೆ.ಟಿ. ಪರ್ನಾಯಕ್ ಅವರಿಂದ ಪ್ರಮಾಣವಚನ ಸ್ವೀಕರಿಸಿದರು. ಖಂಡು ಅವರೊಂದಿಗೆ 11 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. 

60 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 46 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಸತತ ಮೂರನೇ ಬಾರಿಗೆ ಅರುಣಾಚಲ ಪ್ರದೇಶದಲ್ಲಿ ಅಧಿಕಾರಕ್ಕೆ ಮರಳಿದೆ.

Tags:    

Similar News