ನವದೆಹಲಿ, ಜುಲೈ 4 - ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 8 ರಿಂದ 9 ರವರೆಗೆ ರಷ್ಯಾಕ್ಕೆ ಎರಡು ದಿನಗಳ ಭೇಟಿ ನೀಡಲಿದ್ದಾರೆ.
ಎರಡು ದೇಶಗಳ ನಡುವಿನ ಬಹುಮುಖಿ ಒಪ್ಪಂದಗಳನ್ನು ಪುನಾಪರಿಶೀಲಿಸಲು ನಡೆಯಲಿರುವ 22 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಆನಂತರ, ಅವರು ಆಸ್ಟ್ರಿಯಾಕ್ಕೆ ಪ್ರಯಾಣಿಸಲಿದ್ದಾರೆ. ಇದು 41 ವರ್ಷಗಳಲ್ಲಿ ಆ ದೇಶಕ್ಕೆ ಭಾರತೀಯ ಪ್ರಧಾನಿಯೊಬ್ಬರ ಮೊದಲ ಭೇಟಿ ಇದಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ತಿಳಿಸಿದೆ.
ಐದು ವರ್ಷಗಳ ನಂತರ ಮೋದಿಯವರ ಮೊದಲ ರಷ್ಯಾ ಪ್ರವಾಸ ಇದಾಗಿದೆ. 2019 ರಲ್ಲಿ ಅವರು ವ್ಲಾಡಿವೋಸ್ಟಾಕ್‌ನಲ್ಲಿ ನಡೆದ ಆರ್ಥಿಕ ಸಮಾವೇಶದಲ್ಲಿ ಭಾಗವಹಿಸಿದ್ದರು.