PM MODI @74 | ರಾಷ್ಟ್ರಪತಿ, ಖರ್ಗೆ, ಸಚಿವರು, ಮುಖಂಡರಿಂದ ಶುಭ ಹಾರೈಕೆ

ಪ್ರಧಾನಿ ತಮ್ಮ ಜನ್ಮದಿನವನ್ನು ಒಡಿಶಾದಲ್ಲಿ ಕಳೆಯಲಿದ್ದಾರೆ. ರಾಜ್ಯ ಸರ್ಕಾರದ ಮಹಿಳಾ ಕೇಂದ್ರಿತ ಉಪಕ್ರಮವಾದ ಸುಭದ್ರಾ ಯೋಜನೆ ಹಾಗೂ ಹಲವು ರೈಲ್ವೆ-ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.;

Update: 2024-09-17 06:53 GMT

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಸೆ.17)ಕ್ಕೆ 74 ವರ್ಷ ಪೂರೈಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವರು, ಬಿಜೆಪಿ ಮುಖ್ಯಮಂತ್ರಿಗಳು ಹಾಗೂ ನಾಯಕರು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತಿತರರು ಶುಭ ಹಾರೈಸಿದರು.

ರಾಷ್ಟ್ರಪತಿ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ, ʻಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳು. ವ್ಯಕ್ತಿತ್ವ ಮತ್ತು ಕೆಲಸದ ಬಲದಿಂದ ಅಸಾಮಾನ್ಯ ನಾಯಕತ್ವವನ್ನು ನೀಡಿದ್ದೀರಿ. ಸಮೃದ್ಧಿ ಮತ್ತು ಪ್ರತಿಷ್ಠೆಯನ್ನು ಹೆಚ್ಚಿಸಿದ್ದೀರಿ. ನಿಮ್ಮ ಪ್ರಯತ್ನಗಳು ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುತ್ತವೆ ಎಂದು ಆಶಿಸುತ್ತೇನೆ. ದೀರ್ಘಾಯುಷ್ಯ ಮತ್ತು ಆರೋಗ್ಯ ನೀಡುವಂತೆ ದೇವರನ್ನು ಪ್ರಾರ್ಥಿಸುತ್ತೇನೆ,ʼ ಎಂದು ಬರೆದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, #HappyBdayModiji ಹ್ಯಾಶ್‌ಟ್ಯಾಗ್‌ನೊಂದಿಗೆ ಎಕ್ಸ್‌ನಲ್ಲಿ ಬರೆದಿದ್ದಾರೆ; ʻದಣಿವರಿಯದ ಕಠಿಣ ಪರಿಶ್ರಮ, ಮುನ್ನೋಟ ಮತ್ತು ಛಲದಿಂದ ದೇಶವಾಸಿಗಳ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತಂದ ಹಾಗೂ ದೇಶದ ಪ್ರತಿಷ್ಠೆಯನ್ನು ಹೆಚ್ಚಿಸಿದ ಜನಪ್ರಿಯ ಪ್ರಧಾನಿ ಮೋದಿ ಅವರಿಗೆ ಜನ್ಮ ದಿನದ ಹೃತ್ಪೂರ್ವಕ ಶುಭಾಶಯ. ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ,ʼ ಎಂದು ಬರೆದಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಕ್ಸ್‌ ನಲ್ಲಿ ಶುಭ ಹಾರೈಸಿದ್ದಾರೆ. ʻಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಕರುಣಿಸಲಿ,ʼ ಎಂದು ಬರೆದಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಪ್ರಧಾನಿಗೆ ಶುಭಾಶಯ ಕೋರಿದ್ದಾರೆ.

ಪ್ರಧಾನಿ ಒಡಿಶಾ ಭೇಟಿ: ಪ್ರಧಾನಿ ಮಂಗಳವಾರ ಒಡಿಶಾ ಸರ್ಕಾರದ ಪ್ರಮುಖ ಮಹಿಳಾ ಕೇಂದ್ರಿತ ಉಪಕ್ರಮ, ಸುಭದ್ರಾ ಯೋಜನೆ ಸೇರಿದಂತೆ ಇತರ ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

Tags:    

Similar News