ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಚರ್ಚಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯುಸಿ) ಸಭೆಯನ್ನು ಜೂನ್ 8 ರಂದು ಕರೆದಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಶನಿವಾರ ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಲಿದೆ. ಕಾಂಗ್ರೆಸ್ ಚುನಾವಣೆಯಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ತನ್ನ ಸಂಖ್ಯಾಬಲವನ್ನು 52 ರಿಂದ 99 ಕ್ಕೆ ಹೆಚ್ಚಿಸಿಕೊಂಡಿದೆ.
10 ವರ್ಷಗಳ ನಂತರ ಲೋಕಸಭೆಯಲ್ಲಿ ಕಾಂಗ್ರೆಸ್ ಪ್ರತಿ ಪಕ್ಷ ನಾಯಕನ ಸ್ಥಾನವನ್ನು ಪಡೆಯಲಿದೆ. 2014 ಮತ್ತು 2019 ರಲ್ಲಿ ಒಟ್ಟು ಸ್ಥಾನ( 543)ಗಳಲ್ಲಿ ಪಕ್ಷದ ಸಂಸದರ ಸಂಖ್ಯೆ ಶೇ.10 ಕ್ಕಿಂತ ಕಡಿಮೆಯಿದ್ದ ಕಾರಣ ಪ್ರತಿಪಕ್ಷ ನಾಯಕನ ಸ್ಥಾನ ಪಡೆಯುವಲ್ಲಿ ವಿಫಲವಾಗಿತ್ತು.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಲಿ ದ್ದಾರೆ.