ಆಂಧ್ರಪ್ರದೇಶದಲ್ಲಿ ಖಾಸಗಿ ಬಸ್ ದುರಂತ; 20ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನ
ಕರ್ನೂಲ್ ಬಸ್ ದುರಂತ: ಸಂತ್ರಸ್ತರ ಕುಟುಂಬಗಳಿಗೆ ನೆರವು; ನಿಯಂತ್ರಣ ಕೊಠಡಿಗಳ ಸ್ಥಾಪನೆ
ಕರ್ನೂಲು ಜಿಲ್ಲೆಯ ಕಲ್ಲೂರು ಮಂಡಲದ ಚಿನ್ನಟೇಕೂರು ಬಳಿ ಸಂಭವಿಸಿದ ದುರಂತ ಖಾಸಗಿ ಬಸ್ ಬೆಂಕಿಯಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ಸಹಾಯ ಮಾಡಲು ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ.
ಸಹಾಯವಾಣಿ ಸಂಖ್ಯೆಗಳು:
ಕಲೆಕ್ಟರೇಟ್ ನಿಯಂತ್ರಣ ಕೊಠಡಿ: 08518-277305
ಸರ್ಕಾರಿ ಜನರಲ್ ಆಸ್ಪತ್ರೆ (ಕರ್ನೂಲ್): 9121101059
ಸ್ಥಳದಲ್ಲೇ ನಿಯಂತ್ರಣ ಕೊಠಡಿ: 9121101061
ಕರ್ನೂಲ್ ಪೊಲೀಸ್ ನಿಯಂತ್ರಣ ಕೊಠಡಿ: 9121101075
ಜಿಜಿಹೆಚ್ ಸಹಾಯ ಕೇಂದ್ರಗಳು: 9494609814, 9052951010
ಮಾಹಿತಿ ಮತ್ತು ಸಹಾಯಕ್ಕಾಗಿ ಸಂತ್ರಸ್ತರ ಕುಟುಂಬಗಳು ಮೇಲಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಕರ್ನೂಲು ಜಿಲ್ಲಾಧಿಕಾರಿ ಡಾ. ಎ. ಸಿರಿ ತಿಳಿಸಿದ್ದಾರೆ.
ಮೃತರ ಕುಟುಂಬಕ್ಕೆ ಕೇಂದ್ರ ಸರ್ಕಾರ ಪರಿಹಾರ ಘೋಷಣೆ
ಹೈದರಾಬಾದ್ ಸಮೀಪ ಸಂಭವಿಸಿದ ಖಾಸಗಿ ಬಸ್ ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಕಾರ್ಯಾಲಯ ಆಘಾತ ವ್ತಕ್ತಪಡಿಸಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ, ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದೆ. ಮೃತರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ನೆರವು ನೀಡುವುದಾಗಿ ಘೋಷಿಸಿದೆ.
ಕಂಟ್ರೋಲ್ ರೂಂ ಮಾಹಿತಿ
ಈ ದುರ್ಘಟನೆಗೆ ಸಂಬಂಧಿಸಿ ಪ್ರಯಾಣಿಕರು ಮತ್ತವರ ಸಂಬಂಧಿಕರ ಮಾಹಿತಿಗಾಗಿ ನಿಯಂತ್ರಣ ಕೊಠಡಿಗಳನ್ನು ರಚಿಸಾಗಿದೆ.
ಡಿಸಿ ಕಚೇರಿ ನಿಯಂತ್ರಣ ಕೊಠಡಿ ಸಂಖ್ಯೆ 08518-277305
ಕರ್ನೂಲ್ ಆಸ್ಪತ್ರೆ ನಿಯಂತ್ರಣ ಕೊಠಡಿ ಸಂಖ್ಯೆ - 9121101059
ಘಟನಾ ಸ್ಥಳದ ನಿಯಂತ್ರಣ ಕೊಠಡಿ ಸಂಖ್ಯೆ 9121101061
ಕರ್ನೂಲ್ ಪೊಲೀಸ್ ಕಚೇರಿ ನಿಯಂತ್ರಣ ಕೊಠಡಿ ಸಂಖ್ಯೆ 9121101075
ಕರ್ನೂಲ್ ಸರ್ಕಾರಿ ಜನರಲ್ ಆಸ್ಪತ್ರೆ ಸಹಾಯವಾಣಿ ಸಂಖ್ಯೆ 9494609814, 9052951010
ಘಟನೆ ಬಳಿಕ ಬಸ್ ಚಾಲಕ ನಾಪತ್ತೆ
ಬೈಕಿ ಡಿಕ್ಕಿ ಹೊಡೆದ ನಂತರ ಬೆಂಕಿ ಕಾಣಿಸಿಕೊಂಡು ದುರಂತ ಸಂಭವಿಸಿದೆ. ಬಸ್ ಪ್ರಯಾಣಿಕರಲ್ಲಿ 39 ವಯಸ್ಕರು ಮತ್ತು ಇಬ್ಬರು ಮಕ್ಕಳಿದ್ದರು.
ಆವರಲ್ಲಿ 19 ಜನರನ್ನು ಪೊಲೀಸರು ಗುರುತಿಸಿದ್ದಾರೆ. ಅವರೆಲ್ಲರೂ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುರಂತಕ್ಕೀಡಾದ ಬಸ್ಸಿನಿಂದ 11 ಶವಗಳನ್ನು ಹೊರತೆಗೆಯಲಾಗಿದೆ. ಬಸ್ಸಿನ ಮುಖ್ಯ ಚಾಲಕ ಕಾಣೆಯಾಗಿದ್ದಾನೆ. ಮತ್ತೊಬ್ಬ ಚಾಲಕನನ್ನು ಬಂಧಿಸಲಾಗಿದೆ ಎಂದು ಡಿಐಜಿ ಕೋಯ ಪ್ರವೀಣ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.