PM Visits USA| ಕ್ವಾಡ್ ಶೃಂಗಸಭೆ, ಸಿಇಒಗಳೊಂದಿಗೆ ದುಂಡುಮೇಜಿನ ಸಭೆ

Update: 2024-09-21 07:25 GMT

ಹೊಸದಿಲ್ಲಿ: ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗಾಗಿ ಕೆಲಸ ಮಾಡುವ ಪ್ರಮುಖ ಗುಂಪಾಗಿ ಕ್ವಾಡ್ ಹೊರಹೊಮ್ಮಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ಅಮೆರಿಕ ಭೇಟಿಗೆ ಮುನ್ನ ಶನಿವಾರ ಹೇಳಿದ್ದಾರೆ. 

ಮೋದಿ ಅವರು ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ಕ್ವಾಡ್ ಶೃಂಗಸಭೆ, ನ್ಯೂಯಾರ್ಕ್‌ನಲ್ಲಿ ವಿಶ್ವ ಸಂಸ್ಥೆಯ ಜನರಲ್ ಅಸೆಂಬ್ಲಿಯಲ್ಲಿ 'ಭವಿಷ್ಯದ ಶೃಂಗಸಭೆ'ಯಲ್ಲಿ ಪಾಲ್ಗೊಳ್ಳಲಿದ್ದು, ತಂತ್ರಜ್ಞಾನ ಕ್ಷೇತ್ರದ ಅಮೆರಿಕದ ಉನ್ನತ ಸಂಸ್ಥೆಗಳ ಸಿಇಒಗಳೊಂದಿಗೆ ದುಂಡುಮೇಜಿನ ಸಭೆ ನಡೆಸಲಿದ್ದಾರೆ. 

ಕ್ವಾಡ್ ಶೃಂಗಸಭೆಯು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರ ತವರು ವಿಲ್ಮಿಂಗ್ಟನ್‌ನಲ್ಲಿ ಇಂದು(ಶನಿವಾರ) ನಡೆಯಲಿದೆ. ʻಕ್ವಾಡ್ ಶೃಂಗಸಭೆಯಲ್ಲಿ ಅಧ್ಯಕ್ಷ ಬೈಡೆನ್, ಪ್ರಧಾನಿ ಅಲ್ಬನೀಸ್ ಮತ್ತು ಪ್ರಧಾನಿ ಕಿಶಿದಾ ಅವರ ಭೇಟಿಗೆ ಎದುರು ನೋಡುತ್ತಿದ್ದೇನೆʼ ಎಂದು ಮೋದಿ ನಿರ್ಗಮನ ಹೇಳಿಕೆಯಲ್ಲಿ ತಿಳಿಸಿದ್ದಾರೆ. 

ಪ್ರಧಾನಿ ಅವರು ಬೈಡೆನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. 

ಮೋದಿ ಅವರು ಸೆಪ್ಟೆಂಬರ್ 22 ರಂದು ಲಾಂಗ್ ಐಲ್ಯಾಂಡ್‌ನಲ್ಲಿ ಭಾರತೀಯ ಸಮುದಾಯದ ಕಾರ್ಯಕ್ರಮದಲ್ಲಿ ಭಾಗವಹಿಸಲು ನ್ಯೂಯಾರ್ಕ್‌ಗೆ ಪ್ರಯಾಣಿಸಲಿದ್ದಾರೆ. ಮರುದಿನ ಯುಎನ್ ಜನರಲ್ ಅಸೆಂಬ್ಲಿಯಲ್ಲಿ ಭವಿಷ್ಯದ ಶೃಂಗಸಭೆಯಲ್ಲಿ ಮಾತನಾಡಲಿದ್ದಾರೆ. 

ಭಾರತೀಯ ಸಮುದಾಯ ಮತ್ತು ಪ್ರಮುಖ ಅಮೆರಿಕನ್ ಕಂಪನಿಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಲು ಉತ್ಸುಕನಾಗಿದ್ದೇನೆ ಎಂದು ಮೋದಿ ಹೇಳಿದ್ದಾರೆ.

ʻಭವಿಷ್ಯದ ಶೃಂಗಸಭೆಯು ಜಾಗತಿಕ ಸಮುದಾಯಕ್ಕೆ ಭವಿಷ್ಯದ ಹಾದಿಯನ್ನು ಗುರುತಿಸಲು ಒಂದು ಅವಕಾಶ. ನಾನು ಜಗತ್ತಿನ ಆರನೇ ಒಂದ ರಷ್ಟು ಜನರ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತೇನೆʼ ಎಂದು ಹೇಳಿದರು. 

Tags:    

Similar News