ಚುನಾವಣಾ ಆಯೋಗದ ವಿರುದ್ಧ ಮತಕಳವು ಆರೋಪ: ಆ. ​​ 4ರಂದು ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಪಾದಯಾತ್ರೆ

ಈ ಪ್ರತಿಭಟನಾ ಪಾದಯಾತ್ರೆಯು, ಅಕ್ರಮ ನಡೆದಿದೆ ಎಂದು ಆರೋಪಿಸಲಾದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ನಗರದಲ್ಲಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯವರೆಗೆ ನಡೆಯಲಿದೆ.;

Update: 2025-07-29 14:05 GMT

ಈ ಪ್ರತಿಭಟನಾ ಪಾದಯಾತ್ರೆಯು, ಅಕ್ರಮ ನಡೆದಿದೆ ಎಂದು ಆರೋಪಿಸಲಾದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ನಗರದಲ್ಲಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯವರೆಗೆ ನಡೆಯಲಿದೆ.

ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಚುನಾವಣಾ ಅಕ್ರಮ ನಡೆದಿದ್ದು, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಶೀಘ್ರದಲ್ಲೇ ಬಯಲು ಮಾಡುತ್ತೇವೆ," ಎಂದು ಸಂಸತ್ ಅಧಿವೇಶನದ ವೇಳೆ ಗುಡುಗಿದ್ದ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಇದೀಗ ಚುನಾವಣಾ ಆಯೋಗದ ವಿರುದ್ಧ ನೇರ ಹೋರಾಟಕ್ಕೆ ಇಳಿದಿದ್ದಾರೆ. ಈ ಅಕ್ರಮವನ್ನು ಖಂಡಿಸಿ, ಅವರು ಆಗಸ್ಟ್ 4 ರಂದು ಬೆಂಗಳೂರಿನಲ್ಲಿ ಬೃಹತ್ ಪಾದಯಾತ್ರೆ ನಡೆಸಲಿದ್ದಾರೆ.

ಈ ಪ್ರತಿಭಟನಾ ಪಾದಯಾತ್ರೆಯು, ಅಕ್ರಮ ನಡೆದಿದೆ ಎಂದು ಆರೋಪಿಸಲಾದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ನಗರದಲ್ಲಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯವರೆಗೆ ನಡೆಯಲಿದೆ. ರಾಹುಲ್ ಗಾಂಧಿ ಅವರೊಂದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಹಿರಿಯ ನಾಯಕರು, ಸಚಿವರು ಮತ್ತು ಶಾಸಕರು ಭಾಗವಹಿಸಲಿದ್ದಾರೆ.

ರಾಹುಲ್ ಗಾಂಧಿ ಅವರ ಗಂಭೀರ ಆರೋಪ

ಇತ್ತೀಚೆಗೆ ಸಂಸತ್ ಅಧಿವೇಶನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ರಾಹುಲ್ ಗಾಂಧಿ, "ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲಿ ಮತಕಳವು (Voter Theft) ಆಗಿರುವ ಬಗ್ಗೆ ನಮ್ಮ ಬಳಿ ದೃಢವಾದ ದಾಖಲೆಗಳಿವೆ. ಸೂಕ್ತ ಸಮಯದಲ್ಲಿ ನಾವು ಅದನ್ನು ದೇಶದ ಮುಂದಿಡುತ್ತೇವೆ," ಎಂದು ಗಂಭೀರ ಆರೋಪ ಮಾಡಿದ್ದರು. ಈ ಹೇಳಿಕೆಯು ರಾಷ್ಟ್ರಮಟ್ಟದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ, ಆ ಆರೋಪಗಳಿಗೆ ಬಲ ತುಂಬುವಂತೆ ಮತ್ತು ಚುನಾವಣಾ ಆಯೋಗದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಈ ಬೃಹತ್ ಹೋರಾಟ ಆಯೋಜಿಸಿದ್ದಾರೆ.

ಚುನಾವಣಾ ಆಯೋದ ವಿರುದ್ಧದ ಹೋರಾಟವು ಲೋಕತಂತ್ರದ ಮೌಲ್ಯಗಳನ್ನು ಮತ್ತು ಮತದಾರರ ಹಕ್ಕುಗಳನ್ನು ರಕ್ಷಿಸುವ ಹೋರಾಟ ಎಂದು ಕಾಂಗ್ರೆಸ್ ಹೇಳುತ್ತಿದೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಲಾಗಿದೆ ಮತ್ತು ಬೇರೆಯವರ ಹೆಸರನ್ನು ಸೇರಿಸಲಾಗಿದೆ ಎಂಬುದು ಕಾಂಗ್ರೆಸ್‌ನ ಪ್ರಮುಖ ಆರೋಪ. ಚುನಾವಣಾ ಆಯೋಗದ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಪ್ರಶ್ನಿಸುತ್ತೇವೆ ಎಂದು ಸತತವಾಗಿ ಹೇಳುತ್ತಿದೆ.  

Tags:    

Similar News