Rahul Gandhi: ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಕೇಂದ್ರದ ವಿರುದ್ಧ ರಾಹುಲ್ ಟೀಕೆ
Rahul Gandhi: ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ ಕೇಂದ್ರ ಸರ್ಕಾರ ಹಾಗೂ ಡೆಲ್ಲಿ ಸರ್ಕಾರ ಜನರ ಆರೋಗ್ಯದ ವಿಚಾರದಲ್ಲಿ ಸೂಕ್ಷ್ಮತೆ ಕಳೆದುಕೊಂಡಿದೆ ಎಂದು ಹೇಳಿದ್ದಾರೆ.;
ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಕೆಲವು ದಿನಗಳಿಂದ ಅವ್ಯವಸ್ಥೆ ಉಂಟಾಗಿದೆ. ಸುತ್ತಮುತ್ತಲಿನ ರಸ್ತೆಗಳು, ಫುಟ್‌ಪಾತ್‌ಗಳು, ಸುರಂಗಮಾರ್ಗಗಳಲ್ಲಿ ರೋಗಿಗಳು ಮತ್ತು ಅವರ ಕುಟುಂಬಗಳು ಚಿಕಿತ್ಸೆಗಾಗಿ ಕಾಯುತ್ತಿರುವುದು ದೊಡ್ಡ ಸಮಸ್ಯೆ ವ್ಯವಸ್ಥೆಯ ಲೋಪದಂತೆ ಕಂಡುಬರುತ್ತಿದೆ. , ದೆಹಲಿ ಮತ್ತು ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಅಸೂಕ್ಷ್ಮತೆ ಪ್ರದರ್ಶಿಸಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಈ ಸಂಬಂಧ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಲೋಕ ಸಭೆಯಲ್ಲಿ ಪ್ರತಿಪಕ್ಷಗಳ ನಾಯಕ , ರೋಗದಿಂದ ಬಳಲುತ್ತಿರುವ ಜನರು, ಕೊರೆಯುವ ಚಳಿಯಲ್ಲಿಯೂ ಆಸ್ಪತ್ರೆಯ ಹೊರಗೆ ಚಿಕಿತ್ಸೆಗಾಗಿ ಕಾದು ಕುಳಿತಿದ್ದಾರೆ. ಆದರೆ ದೆಹಲಿ ಸರ್ಕಾರ ಅಥವಾ ಕೇಂದ್ರ ಸರ್ಕಾರವು ಈ ಬಗ್ಗೆ ಗಮನಹರಿಸಿಲ್ಲ ಯಾಕೆ, ಅವರ ನೋವುಗಳಿಗೆ ಸ್ಪಂದಿಸುವ ಸೂಕ್ಷ್ಮತೆಯೂ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದ ನಾನಾ ಊರುಗಳಿಂದ ಚಿಕಿತ್ಸೆಗಾಗಿ ಬಂದಿರುವ ಬಡ ಕುಟುಂಬದ ಜನರು ಆಸ್ಪತ್ರೆಯ ಹೊರಗೆ ಹೊಸ ಭರವಸೆಯೊಂದಿಗೆ ಕಾದು ಕುಳಿತಿದ್ದಾರೆ. ಅಲ್ಲಿನ ನೂರಾರು ಮಂದಿಯನ್ನು ಭೇಟಿ ಮಾಡಿದೆ. ಅವರ ಸಂಕಷ್ಟಗಳನ್ನು ಆಲಿಸಿದೆ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ದೆಹಲಿ ಮತ್ತು ಕೇಂದ್ರ ಸರ್ಕಾರ ಸಾರ್ವಜನಿಕರ ನೋವುಗಳಿಗೆ ಸ್ಪಂದಿಸುತ್ತಿಲ್ಲ. ಅವರ ಮೂಲಭೂತ ಸೌಕರ್ಯಗಳನ್ನು ಪೂರೈಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.