ರಾಜಸ್ಥಾನ: ನೀಟ್ ಆಕಾಂಕ್ಷಿ ಆತ್ಮಹತ್ಯೆ

ಇದು ಜನವರಿಯಿಂದ ಕೋಟಾದಲ್ಲಿ ನಡೆದಿರುವ ಹನ್ನೆರಡನೇ ಶಂಕಿತ ಆತ್ಮಹತ್ಯೆ.

Update: 2024-06-27 13:56 GMT

ಕೋಟಾ, ಜೂನ್ 27- 17 ವರ್ಷದ ವೈದ್ಯಕೀಯ ಆಕಾಂಕ್ಷಿಯೊಬ್ಬರು ಇಲ್ಲಿನ ಬಾಡಿಗೆ ನಿವಾಸದಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

12 ನೇ ತರಗತಿಯ ವಿದ್ಯಾರ್ಥಿ, ಬಿಹಾರ ಮೂಲದ ಹೃಷಿತ್ ಕುಮಾರ್ ಅಗರವಾಲ್ ಇಲ್ಲಿನ ಕೋಚಿಂಗ್ ಇನ್ಸ್ಟಿಟ್ಯೂಟ್ನಲ್ಲಿ ನೀಟ್‌ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು ಎಂದು ದಾದಾಬರಿ ಎಎಸ್ಐ ಶಂಭು ದಯಾಳ್ ಹೇಳಿದ್ದಾರೆ. ಜನವರಿಯಿಂದ ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡ ಶಂಕಿತ ಹನ್ನೆರಡನೇ ಪ್ರಕರಣ ಇದಾಗಿದೆ. ಕೋಟಾದಲ್ಲಿ 2023 ರಲ್ಲಿ 26 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. 

ವಿದ್ಯಾರ್ಥಿ ಚೋಟಾ ಚೌರಾಹಿನ್ ದಾದಾಬರಿ ಪ್ರದೇಶದ ಕಟ್ಟಡವೊಂದರಲ್ಲಿ ಬಾಡಿಗೆ ಕೋಣೆಯಲ್ಲಿ ವಾಸಿಸುತ್ತಿದ್ದರು. ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಾಗಿಲು ಬಡಿದರೂ ತೆರೆಯದ ಹಿನ್ನೆಲೆಯಲ್ಲಿ ಇತರ ವಿದ್ಯಾರ್ಥಿಗಳು ಪೊಲೀಸರಿಗೆ ಮಾಹಿತಿ ನೀಡಿದರು ಎಂದು ಹೇಳಿದರು. ಪೊಲೀಸ್ ತಂಡ ಬಾಗಿಲು ಒಡೆದು ನೋಡಿದಾಗ ಅಗರ್ವಾಲ್ ತನ್ನ ಕೋಣೆಯೊಳಗೆ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡಿರುವುದು ಕಂಡುಬಂದಿದೆ. ಅವರ ಕೊಠಡಿಯಿಂದ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಎಎಸ್ಐ ತಿಳಿಸಿದ್ದಾರೆ. 

ದೇಹ ಕೊಳೆತ ಸ್ಥಿತಿಯಲ್ಲಿತ್ತು. ಬುಧವಾರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ ಎಂದರು.

ಅಗರ್ವಾಲ್ ಅವರು ಕಳೆದ ಎರಡು ವರ್ಷಗಳಿಂದ ಕೋಟಾದಲ್ಲಿ ವೈದ್ಯಕೀಯ ಕಾಲೇಜು ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು ಮತ್ತು ಕೋಚಿಂಗ್ ಪಡೆಯುತ್ತಿದ್ದರು ಎಂದು ದಾದಾಬರಿ ಸರ್ಕಲ್ ಇನ್ಸ್‌ಪೆಕ್ಟರ್ ನರೇಶ್ ಕುಮಾರ್ ಮೀನಾ ತಿಳಿಸಿದ್ದಾರೆ. ಮೃತದೇಹವನ್ನು ಎಂಬಿಎಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೋಷಕರು ಬಂದ ನಂತರ ಪರೀಕ್ಷೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಜೂನ್ 16 ರಂದು ಮತ್ತೊಬ್ಬ ಬಿಹಾರ ಮೂಲದ ಆಯುಷ್ ಜೈಸ್ವಾಲ್ (17) ಕೋಟಾದ ಪಿಜಿ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡರು. ಅವರು ಐಐಟಿ-ಜೆಇಇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. 18 ವರ್ಷದ ನೀಟ್‌ ಆಕಾಂಕ್ಷಿ ಬಾಗೀಶಾ ತಿವಾರಿ ಅವರು ಕೋಚಿಂಗ್ ಹಬ್‌ನಲ್ಲಿರುವ ಕಟ್ಟಡದ ಒಂಬತ್ತನೇ ಮಹಡಿಯಿಂದ ಜಿಗಿದ ನಂತರ ಸಾವಿಗೀಡಾದರು. ನೀಟ್‌-ಯುಜಿ ಪರೀಕ್ಷೆಯಲ್ಲಿ ಅವರು 320 ಅಂಕ ಗಳಿಸಿದ್ದರು. 

Tags:    

Similar News