ರಾಜಸ್ಥಾನ: ಆರೆಸ್ಸೆಸ್ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಿಕೆ ಮೇಲಿನ ನಿಷೇಧ ತೆರವು
ಹರಿಯಾಣ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ ಮತ್ತು ಚತ್ತೀಸ್‌ಗಢ ಸೇರಿದಂತೆ ಹಲವು ರಾಜ್ಯ ಸರ್ಕಾರಗಳು ಸರ್ಕಾರಿ ನೌಕರರ ಮೇಲಿನ ಇಂಥ ನಿರ್ಬಂಧವನ್ನುಈಗಾಗಲೇ ತೆಗೆದುಹಾಕಿವೆ.;
ಜೈಪುರ: ರಾಜಸ್ಥಾನದ ಬಿಜೆಪಿ ಸರ್ಕಾರವು ಸರ್ಕಾರಿ ನೌಕರರು ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ ಮೇಲಿನ ನಿಷೇಧವನ್ನು ತೆಗೆದುಹಾಕಿದೆ.
ಸಿಬ್ಬಂದಿ ಇಲಾಖೆಯ ಜಂಟಿ ಕಾರ್ಯದರ್ಶಿ ರಾಜೇಂದ್ರ ಸಿಂಗ್ ಕಾವಿಯಾ ಅವರು 52 ವರ್ಷಗಳ ನಿಷೇಧವನ್ನು ತೆಗೆದುಹಾಕಲು ಸುತ್ತೋಲೆ ಹೊರಡಿಸಿದ್ದಾರೆ.
ಸುತ್ತೋಲೆ ಪ್ರಕಾರ, 1972 ಮತ್ತು 1981 ರ ಸೂಚನೆಗಳನ್ನು ಪರಿಶೀಲಿಸಿದ ನಂತರ ಈ ಹಿಂದೆ ಚಟುವಟಿಕೆಗಳನ್ನು ನಿಷೇಧಿಸಿದ ಸಂಘಟನೆಗಳ ಪಟ್ಟಿಯಿಂದ ಆರ್‌ಎಸ್‌ಎಸ್ ಹೆಸರನ್ನು ತೆಗೆದುಹಾಕಲು ನಿರ್ಧರಿಸಲಾಗಿದೆ.
ಇತ್ತೀಚೆಗೆ ಕೇಂದ್ರ ಸರ್ಕಾರವು ಸರ್ಕಾರಿ ನೌಕರರು ಆರೆಸ್ಸೆಸ್ ಚಟುವಟಿಕೆಗಳಲ್ಲಿ ಭಾಗವಹಿಸುವ ನಿರ್ಬಂಧವನ್ನು ಹಿಂಪಡೆದಿತ್ತು. 1966ರ ನವೆಂಬರ್‌ನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಆಡಳಿತ ಹೇರಿದ್ದ ನಿಷೇಧವನ್ನು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯ ತೆಗೆದುಹಾಕಿತು.
ಹರಿಯಾಣ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ ಮತ್ತು ಚತ್ತೀಸ್‌ಗಢ ಸೇರಿದಂತೆ ಹಲವು ರಾಜ್ಯ ಸರ್ಕಾರಗಳು ಈಗಾಗಲೇ ಇಂಥ ನಿರ್ಬಂಧಗಳನ್ನು ತೆಗೆದುಹಾಕಿವೆ.