ಬಿಷ್ಣೋಯ್ ದೇವಸ್ಥಾನದಲ್ಲಿ ಕ್ಷಮೆಯಾಚಿಸಿ, ಇಲ್ಲವಾದಲ್ಲಿ 5 ಕೋಟಿ ಕೊಡಿ: ಸಲ್ಮಾನ್ ಖಾನ್ ಗೆ ಹೊಸ ಜೀವ ಬೆದರಿಕೆ

ಸಂದೇಶ ಕಳುಹಿಸಿದ ವ್ಯಕ್ತಿ ತಾನು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ನ ಸಹೋದರ ಎಂದು ಹೇಳಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದು 5 ಕೋಟಿ ರೂಪಾಯಿ ನೀಡಬೇಕು ಎಂದು ಬೆದರಿಕೆ ಒಡ್ಡಲಾಗಿದೆ.;

Update: 2024-11-05 08:46 GMT
ಸಲ್ಮಾನ್‌ ಖಾನ್‌

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಂದು ಬೆದರಿಕೆ ಬಂದಿದ್ದು, 5 ಕೋಟಿ ರೂಪಾಯಿಗೆ ಬೇಡಿಕೆ ಇಡಲಾಗಿದೆ. ಮುಂಬೈ ಸಂಚಾರ ಪೊಲೀಸ್ ಸಹಾಯವಾಣಿಗೆ ಬೆದರಿಕೆ ಸಂದೇಶ ಬಂದಿದ್ದು, ಅಧಿಕಾರಿಯೊಬ್ಬರು ಮಧ್ಯರಾತ್ರಿಯ ಸುಮಾರಿಗೆ ಅದನ್ನು ನೋಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂದೇಶ ಕಳುಹಿಸಿದ ವ್ಯಕ್ತಿ ತಾನು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ನ ಸಹೋದರ ಎಂದು ಹೇಳಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅಲ್ಲದೆ ಸಲ್ಮಾನ್‌ ಬಿಷ್ಣೋಯಿ ದೇವಸ್ಥಾನದಲ್ಲಿ ಕ್ಷಮೆ ಕೇಳಬೇಕು ಅಥವಾ 5 ಕೋಟಿ ರೂಪಾಯಿ ನೀಡಬೇಕು ಎಂದು ಬೆದರಿಕೆ ಒಡ್ಡಲಾಗಿದೆ.

"ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಅವರು ನಮ್ಮ (ಬಿಷ್ಣೋಯ್ ಸಮುದಾಯ) ದೇವಸ್ಥಾನಕ್ಕೆ ಹೋಗಿ ಕ್ಷಮೆಯಾಚಿಸಬೇಕು. ಅದು ಅಲ್ಲದೇ ಹೋದರೆ 5 ಕೋಟಿ ರೂಪಾಯಿ ನೀಡಬೇಕು. ಅವನು ಹಾಗೆ ಮಾಡದಿದ್ದರೆ, ನಾವು ಅವನನ್ನು ಕೊಲ್ಲುತ್ತೇವೆ. ನಮ್ಮ ಗ್ಯಾಂಗ್ ಇನ್ನೂ ಸಕ್ರಿಯವಾಗಿದೆ" ಎಂದು ಸಂದೇಶದಲ್ಲಿ ಕಳುಹಿಸಲಾಗಿದೆ.

ಬೆದರಿಕೆ ಸಂದೇಶದ ಮೂಲದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಲ್ಮಾನ್ ಖಾನ್ ಅವರಿಗೆ ಭದ್ರತಾ ಕ್ರಮಗಳನ್ನು ಹೆಚ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೊಲೆ ಪ್ರಯತ್ನ ಮತ್ತು ಸುಲಿಗೆ ಸೇರಿದಂತೆ ವಿವಿಧ ಆರೋಪಗಳಲ್ಲಿ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್‌ಗೆ ಈ ಸಂದೇಶವು ಸಂಬಂಧ ಹೊಂದಿದೆಯೇ ಎಂದು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Tags:    

Similar News