ನವದೆಹಲಿ, ಜೂನ್ 10- ದೆಹಲಿಯ ರೋಸ್ ಅವೆನ್ಯೂದಲ್ಲಿರುವ ಆಮ್ ಆದ್ಮಿ ಪಕ್ಷದ ಕಚೇರಿಯನ್ನು ಖಾಲಿ ಮಾಡಲು ನೀಡಿದ್ದ ಗಡುವನ್ನು ಸುಪ್ರೀಂ ಕೋರ್ಟ್ ಆಗಸ್ಟ್ 10 ರವರೆಗೆ ವಿಸ್ತರಿಸಿದೆ.
ನ್ಯಾಯಾಂಗ ಮೂಲಸೌಕರ್ಯವನ್ನು ವಿಸ್ತರಿಸಲು ಪ್ರಸ್ತುತ ಕಚೇರಿಯನ್ನು ದೆಹಲಿ ಹೈಕೋರ್ಟ್‌ಗೆ ಹಂಚಲಾಗಿದೆ ಎಂದು ಗಮನಿಸಿದ ಸುಪ್ರೀಂ ಕೋರ್ಟ್, ಜೂನ್ 15 ರೊಳಗೆ ಕಚೇರಿಯನ್ನು ಖಾಲಿ ಮಾಡುವಂತೆ ಮಾರ್ಚ್ 4 ರಂದು ಸೂಚಿಸಿತ್ತು.
ನ್ಯಾಯಮೂರ್ತಿಗಳಾದ ವಿಕ್ರನ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ರಜಾಕಾಲದ ಪೀಠವು ಎಎಪಿ ಮತ್ತು ಇತರರ ಪರವಾಗಿ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರ ಸಲ್ಲಿಕೆಯನ್ನು ಗಮನಿಸಿ, ಆಗಸ್ಟ್ 10 ರವರೆಗೆ ಗಡುವು ವಿಸ್ತರಿಸಿದೆ. ದೆಹಲಿಯಲ್ಲಿ ಜಿಲ್ಲಾ ನ್ಯಾಯಾಂಗಕ್ಕೆ ಮೂಲಸೌಕರ್ಯ ಕಲ್ಪಿಸಲು ಈ ಕಚೇರಿಯನ್ನು ದೆಹಲಿ ಹೈಕೋರ್ಟ್‌ಗೆ ಹಂಚಲಾಗಿತ್ತು.