ರೈತರ ಕುಂದುಕೊರತೆ ಪರಿಹರಿಸಲು ಸಮಿತಿ ರಚಿಸಿದ ಸುಪ್ರೀಂ

Update: 2024-09-02 08:33 GMT

ಶಂಭು ಗಡಿಯಲ್ಲಿ ಪ್ರತಿಭಟನೆ ನಿರತ ರೈತರ ಕುಂದುಕೊರತೆಗಳನ್ನು ಸೌಹಾರ್ದಯುತವಾಗಿ ಪರಿಹರಿಸಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ನವಾಬ್ ಸಿಂಗ್ ನೇತೃತ್ವದ ಸಮಿತಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಸೆಪ್ಟೆಂಬರ್ 2) ರಚಿಸಿದೆ. 

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಒಂದು ವಾರದೊಳಗೆ ಮೊದಲ ಸಭೆಯನ್ನು ಕರೆಯುವಂತೆ ಸಮಿತಿಗೆ ಸೂಚಿಸಿತು. ರೈತರ ಸಮಸ್ಯೆಗಳನ್ನು ರಾಜಕೀಕರಣಗೊಳಿಸಬಾರದು ಮತ್ತು ಹಂತಹಂತವಾಗಿ ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. 

ಪ್ರತಿಭಟನೆ ಸ್ಥಳ ಬದಲಾವಣೆ: ರೈತರು ತಮ್ಮ ಶಾಂತಿಯುತ ಆಂದೋಲನವನ್ನು ಬೇರೆ ತಾಣಗಳಿಗೆ ಬದಲಿಸಲು ಸ್ವತಂತ್ರರು ಎಂದು ನ್ಯಾಯಾಲಯ ಹೇಳಿದೆ. 

ರೈತರು ಅಂಬಾಲ ಬಳಿಯ ಶಂಭು ಗಡಿಯಲ್ಲಿ ನಿರ್ಮಿಸಿರುವ ಬ್ಯಾರಿಕೇಡ್‌ಗಳನ್ನು ಒಂದು ವಾರದೊಳಗೆ ತೆಗೆದುಹಾಕಬೇಕೆಂಬ ಫೆ.13ರ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ, ಹರಿಯಾಣ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ವಿಚಾರಣೆ ನಡೆಸುತ್ತಿದೆ. ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾಯಿದೆಗೆ ಆಗ್ರಹಿಸಿ ರೈತರು ದೆಹಲಿಗೆ ಮೆರವಣಿಗೆ ನಡೆಸುವುದಾಗಿ ಘೋಷಿಸಿದ ನಂತರ ಹರಿಯಾಣ ಸರ್ಕಾರವು ಫೆಬ್ರವರಿಯಲ್ಲಿ ಅಂಬಾಲಾ-ನವದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಿತ್ತು.

Tags:    

Similar News