ನವದೆಹಲಿ: ನೀಟ್-ಯುಜಿ ಮರುಪರೀಕ್ಷೆ ತಿರಸ್ಕರಿಸಿ ನೀಡಿದ್ದ ಆದೇಶವನ್ನು ಮತ್ತೆ ಪರಿಶೀಲಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ʻಪರೀಕ್ಷೆಯ ಸಮಗ್ರತೆಗೆ ಧಕ್ಕೆಯುಂಟುಮಾಡುವ ವ್ಯವಸ್ಥಿತ ಸೋರಿಕೆ ಅಥವಾ ದುಷ್ಕೃತ್ಯವನ್ನು ಸಾಬೀತುಪಡಿಸುವ ಯಾವುದೇ ಸಾಕ್ಷ್ಯಗಳಿಲ್ಲʼ ಎಂದು ಆಗಸ್ಟ್ 2 ರ ಆದೇಶದಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು.
ಕಾಜಲ್ ಕುಮಾರಿ ಎಂಬುವರು ಆದೇಶವನ್ನು ಮರುಪರಿಶೀಲಿಸಬೇಕೆಂದು ಕೋರಿದ್ದಾರೆ.
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್‌ಟಿಎ)ಯ ಕಾರ್ಯಚಟುವಟಿಕೆಯನ್ನು ಪರಿಶೀಲಿ ಸಲು ಇಸ್ರೋ ಮಾಜಿ ಮುಖ್ಯಸ್ಥ ಕೆ. ರಾಧಾಕೃಷ್ಣನ್ ನೇತೃತ್ವದ ಏಳು ಸದಸ್ಯರ ಸಮಿತಿಯ ವ್ಯಾಪ್ತಿಯನ್ನು ಸುಪ್ರೀಂ ಕೋರ್ಟ್ ವಿಸ್ತರಿಸಿದ್ದು, ನೀಟ್-ಯುಜಿ ಪರೀಕ್ಷೆಗೆ ಸುಧಾರಣೆಗಳನ್ನು ಶಿಫಾರಸು ಮಾಡಲು ಹೇಳಿದೆ. ಸಮಿತಿ ಸೆಪ್ಟೆಂಬರ್ 30 ರೊಳಗೆ ವರದಿ ಸಲ್ಲಿಸಬೇಕಿದೆ.
ಎಂಬಿಬಿಎಸ್, ಬಿಡಿಎಸ್, ಆಯುಷ್ ಮತ್ತು ಇತರ ಸಂಬಂಧಿತ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಮೇ 5 ರಂದು ನಡೆದ ನೀಟ್-ಯುಜಿ 2024 ಪರೀಕ್ಷೆಯಲ್ಲಿ 23 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.