ರಾಜಿ ಮಾಡಿಕೊಂಡ ತಕ್ಷಣ ಲೈಂಗಿಕ ಕಿರುಕುಳ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ಆರೋಪಿ ಮತ್ತು ಸಂತ್ರಸ್ತೆಯ ಕುಟುಂಬ ಸಂಧಾನ ಮಾಡಿಕೊಂಡಿದ್ದಾರೆ ಎಂಬ ಆಧಾರದ ಮೇಲೆ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸಿದ ರಾಜಸ್ಥಾನ ಹೈಕೋರ್ಟ್ ನಿರ್ಧಾರವನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ.;
ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಯ ಹಂತದಲ್ಲಿ ದೂರುದಾರರು ಮತ್ತು ಆರೋಪಿಗಳು ʼರಾಜಿ ಸಂಧಾನʼ ಮಾಡಿಕೊಂಡರೆ ಆ ಪ್ರಕರಣವನ್ನು ರದ್ದುಗೊಳಿಸುವಂತಿಲ್ಲಎಂದು ಸುಪ್ರೀಂ ಕೋರ್ಟ್ ಗುರುವಾರ (ನವೆಂಬರ್ 7) ತೀರ್ಪು ನೀಡಿದೆ. ರಾಜಸ್ಥಾನದ ಹೈಕೋರ್ಟ್ ನೀಡಿದ ತೀರ್ಪನ್ನು ತಳ್ಳಿ ಹಾಕಿದ ಕೋರ್ಟ್ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ.
ಆರೋಪಿ ಮತ್ತು ಸಂತ್ರಸ್ತರ ಕುಟುಂಬದ ನಡುವಿನ ರಾಜಿ ಆಧಾರದ ಮೇಲೆ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸಿದ ರಾಜಸ್ಥಾನ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಸಮರ್ಪಕವಲ್ಲ ಎಂದು ಹೇಳಿತು.
ಏನಿದು ಪ್ರಕರಣ
ರಾಜಸ್ಥಾನದ ಗಂಗಾಪುರದಲ್ಲಿ 2022ರಲ್ಲಿ ಸರ್ಕಾರಿ ಶಾಲಾ ಶಿಕ್ಷಕನ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿ ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯೊಬ್ಬಳು ಪೊಲೀಸರಿಗೆ ದೂರು ನೀಡಿದ್ದಳು. ಆರೋಪಿಯ ಮೇಲೆ ಪೋಕ್ಸೊ ಕಾಯ್ದೆ ಮತ್ತು ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ತನಿಖಾಧಿಕಾರಿಗಳು ಅಪ್ರಾಪ್ತ ವಯಸ್ಸಿನ ಬಾಲಕಿಯ ಹೇಳಿಕೆಯನ್ನೂದಾಖಲಿಸಿದ್ದರು.
ವಿಚಾರಣೆಯ ಹಂತದಲ್ಲಿ ಆರೋಪಿ ವಿಮಲ್ ಕುಮಾರ್ ಗುಪ್ತಾ. ಬಾಲಕಿಯ ಕುಟುಂಬದಿಂದ ಸ್ಟಾಂಪ್ ಪೇಪರ್‌ನಲ್ಲಿ ʼರಾಜಿ ಒಪ್ಪಂದʼದ ಹೇಳಿಕೆಯನ್ನು ಪಡೆದಿಕೊಂಡು ಪೊಲೀಸರಿಗೆ ಸಲ್ಲಿಸಿದ್ದ. ತಾವು ತಪ್ಪು ತಿಳುವಳಿಕೆಯಿಂದ ಪೊಲೀಸ್ ದೂರು ದಾಖಲಿಸಿದ್ದೇವೆ. ವಿರುದ್ಧ ಯಾವುದೇ ಕಾನೂನು ಕ್ರಮ ಬಯಸುವುದಿಲ್ಲ ಎಂದು ರಾಜಿ ಪತ್ರದಲ್ಲಿ ಬರೆಯಲಾಗಿತ್ತು. ಪೊಲೀಸರು ಅದನ್ನು ಸ್ವೀಕರಿಸಿ ವರದಿ ಸಲ್ಲಿಸಿದ್ದರು. ವಿಚಾರಣಚಾ ನ್ಯಾಯಾಲಯವು ಆರೋಪಿಯ ಪತ್ರವನ್ನು ತಿರಸ್ಕರಿಸಿತ್ತು ಆರೋಪಿ ತಪ್ಪಿತಸ್ಥ ಎಂದು ಘೋಷಿಸಿತ್ತು.
ಬಳಿ ಆರೋಪಿ ಹೈಕೋರ್ಟ್ ಮೆಟ್ಟಿಲೇರಿದ್ದ. ಉಚ್ಛ ನ್ಯಾಯಾಲಯ ಅದನ್ನು ಸ್ವೀಕರಿಸಿ. ಎಫ್ಐಆರ್ ಅನ್ನು ರದ್ದುಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ರಾಮ್ಜಿ ಲಾಲ್ ಬೈರ್ವಾ ಎಂಬುವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸಿ.ಟಿ.ರವಿಕುಮಾರ್ ಮತ್ತು ಪಿ.ವಿ.ಸಂಜಯ್ ಕುಮಾರ್ ಅವರಿದ್ದ ನ್ಯಾಯಪೀಠವು ಹೈಕೋರ್ಟ್ ತೀರ್ಪು ರದ್ದುಗೊಳಿಸಿದೆ. ಆರೋಪಿ ಶಿಕ್ಷಕನ ವಿರುದ್ಧ ಕಾನೂನು ಕ್ರಮ ಜರುಗಿಸಲು ಅವಕಾಶ ಮಾಡಿಕೊಟ್ಟಿದೆ.
ಕ್ರಿಮಿನಲ್ ಪ್ರಕರಣದಲ್ಲಿ ಬಾಧೆಗೆ ಒಳಗಾದವರು ಅರ್ಜಿಯನ್ನು ಸಲ್ಲಿಸಲು ಸಾಧ್ಯವಿಲ್ಲ ಎಂದು ಉನ್ನತ ನ್ಯಾಯಾಲಯವು ಆರಂಭದಲ್ಲಿ ಹೇಳಿತ್ತು, ನಂತರ ಅರ್ಜಿಯನ್ನು ಕೈಗೆತ್ತಿಕೊಂಡು ಪರಿಶೀಲಿಸಲು ನಿರ್ಧರಿಸಿದೆ. ಆರೋಪಿ ಮತ್ತು ಸಂತ್ರಸ್ತೆಯ ತಂದೆಯನ್ನು ಪ್ರಕರಣದಲ್ಲಿ ಪ್ರತಿವಾದಿಗಳನ್ನಾಗಿ ಮಾಡಲು ಅದು ಆದೇಶಿಸಿದೆ.